ETV Bharat / state

ಕಾಡಂಚಿನ ಜನರಿಗೆ ವಿಮೆ ನೀಡುವ ಬಗ್ಗೆ ಚರ್ಚಿಸಿ ಕ್ರಮ: ಸಚಿವ ಈಶ್ವರ್ ಖಂಡ್ರೆ - Eshwar Khandre - ESHWAR KHANDRE

ಕಾಡಂಚಿನ ಜನರಿಗೆ ಸರ್ಕಾರದ ಸಹಯೋಗದಲ್ಲಿ ವಿಮೆ ಮಾಡಿಸಬೇಕೆಂಬ ಸಲಹೆಯ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ (ETV Bharat)
author img

By ETV Bharat Karnataka Team

Published : Aug 12, 2024, 5:56 PM IST

ಬೆಂಗಳೂರು: ಕಾಡಂಚಿನ ವಸತಿ ಪ್ರದೇಶಗಳ ಜನರಿಗೆ ವಿಮಾ ಸೌಲಭ್ಯ ಕಲ್ಪಿಸುವ ಕುರಿತು ಪರಿಶೀಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಇಂದು ನಡೆದ ಮಾನವ-ಆನೆ ಸಂಘರ್ಷ ನಿರ್ವಹಣೆ ಅಂತಾರಾಷ್ಟ್ರೀಯ ಸಮಾವೇಶದ ಅಂಗವಾಗಿ ರೈತರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾಡಿನಂಚಿನ ಜನರಿಗೆ ಸರ್ಕಾರದ ಸಹಯೋಗದಲ್ಲಿ ವಿಮೆ ಮಾಡಿಸಬೇಕು ಎಂಬ ಸಲಹೆಯ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಆನೆಗಳಿಗೆ ಸಂತಾನ ಹರಣಕ್ಕೆ ಕ್ರಮ ಕೈಗೊಂಡು ಗಜ ಸಂತತಿ ತಗ್ಗಿಸಬೇಕು. ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕು ಎಂಬ ಸಲಹೆಗಳಿಗೆ ಸ್ಪಂದಿಸಿದ ಸಚಿವರು ಈಗಾಗಲೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ವಹಿಸಿದೆ ಎಂದರು.

ಆನೆಗಳು ನಾಡಿಗೆ ಬಾರದಂತೆ ಕಾಡಿನಲ್ಲೇ ಅವುಗಳಿಗೆ ಕಬ್ಬು, ಹಲಸು ಇತ್ಯಾದಿ ಆಹಾರ ಸಿಗುವಂತೆ ಮಾಡಬೇಕು ಎಂಬ ಸಲಹೆ ಕುರಿತಂತೆ ಪ್ರತಿಕ್ರಿಯಿಸಿ, ಆನೆಗಳಿಗೆ ಸ್ವಾದಿಷ್ಟ ಆಹಾರವನ್ನು ಕಾಡಿನಲ್ಲಿ ಬೆಳೆಸಿ ನೀಡುವುದು ಸೂಕ್ತವಲ್ಲ ಎಂಬ ತಜ್ಞರ ಅಭಿಪ್ರಾಯವಿದೆ. ಈ ಬಗ್ಗೆ ಪರಾಮರ್ಶಿಸಲಾಗುವುದು.
ಜೀವನ- ಜೀವನೋಪಾಯ ಎರಡೂ ಇರಬೇಕು. ನಮ್ಮ ಪೂರ್ವಿಕರು ನೈಸರ್ಗಿಕ ಸಂಪತ್ತನ್ನು ಹಿತಮಿತವಾಗಿ ಬಳಸುತ್ತಿದ್ದರು. ಆದರೆ ಈಗ ನೈಸರ್ಗಿಕ ಸಂಪನ್ಮೂಲದ ಅತಿಯಾದ ಬಳಕೆಯೂ ಅರಣ್ಯ ನಾಶಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು, ಕ್ರಮ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮ ವಿದ್ಯುತ್ ಸ್ಪರ್ಶದಿಂದ 26 ಆನೆಗಳು ಸಾವಿಗೀಡಾಗಿವೆ ಎಂಬ ಸಭಿಕರು ನೀಡಿದ ಮಾಹಿತಿ ಆಘಾತಕಾರಿ. ಈ ನಿಟ್ಟಿನಲ್ಲಿ ಅಕ್ರಮವಾಗಿ ವನ್ಯ ಜೀವಿ ಸಾವಿಗೆ ಕಾರಣವಾಗುವಂತೆ ಬೇಲಿಗೆ ವಿದ್ಯುತ್ ಹರಿಸದಂತೆ ಕ್ರಮ ಕೈಗೊಳ್ಳಲಾಗುವುದು. ಸಭೆಯಲ್ಲಿ ವ್ಯಕ್ತವಾದ ಎಲ್ಲ ಸಲಹೆಗಳ ಬಗ್ಗೆ ಚರ್ಚಿಸಿ ಸೂಕ್ತವಾದ ಸಲಹೆಗಳನ್ನು ಅಳವಡಿಸಿಕೊಳ್ಳುವುದು ಎಂದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ ಸಭೆಯಲ್ಲಿ ಉಪಸ್ಥಿತರಿದ್ದರು.

ಸಚಿವರ ಮಟ್ಟದ ಸಭೆ
ಸಚಿವರ ಮಟ್ಟದ ಸಭೆ (ETV Bharat)

ಕೇಂದ್ರ ಸರ್ಕಾರ ಕ್ಯಾಂಪಾ ನಿಧಿ ನೀಡುತ್ತಿಲ್ಲ: ಮತ್ತೊಂದೆಡೆ, ಸಚಿವರ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವ ಖಂಡ್ರೆ ಮಾತನಾಡಿ, ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ. ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್​ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಕೇರಳದ ಅರಣ್ಯ ಸಚಿವ ಎ.ಕೆ.ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಇದಕ್ಕೆ ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ್​ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಸಭೆಯಲ್ಲಿ ಜಾರ್ಖಂಡ್ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಿವೆಂಧನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಹಾಗೂ ಉನ್ನತ ಐಎಫ್​ಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧ, 9 ಆನೆ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.