ETV Bharat / state

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್ : ನಾವು ಕನ್ನಡಾಭಿಮಾನಿಗಳು ಎಂದ ಬಾಲಕಿ ಪೋಷಕರು; ಸಿಪಿಐ ವರ್ಗಾವಣೆ - BELAGAVI CONDUCTOR CASE

ಕಂಡಕ್ಟರ್ ಮೇಲಿನ ಪೋಕ್ಸೋ ಪ್ರಕರಣ ವಾಪಸ್ ಪಡೆಯುವುದಾಗಿ ಬಾಲಕಿ ಪೋಷಕರು ತಿಳಿಸಿದ್ದಾರೆ. ಜೊತೆಗೆ ತಾವು ಕನ್ನಡಾಭಿಮಾನಿಗಳು ಎನ್ನುವ ಮೂಲಕ ಪ್ರಕರಣಕ್ಕೆ ತೆರೆ ಎಳೆದಿದ್ದಾರೆ.

ಬೆಳಗಾವಿ ಕಂಡಕ್ಟರ್,Belagavi conductor,pocso case,attack on conductor
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ (ETV Bharat)
author img

By ETV Bharat Karnataka Team

Published : Feb 25, 2025, 12:52 PM IST

ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ. ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ''ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು‌ ಸರಿಯಲ್ಲ.

ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್‌ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ'' ಎಂದು ಬಾಲಕಿಯ ಪೋಷಕರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ (ETV Bharat)

ಈ ಕುರಿತು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ವಿಡಿಯೋ ಮೂಲಕ ಪೋಕ್ಸೋ ಕೇಸ್ ವಾಪಸ್ ಪಡೆಯುವುದಾಗಿ ದೂರುದಾರರು ತಿಳಿಸಿದ್ದಾರೆ. ಅದರಲ್ಲಿ ನಾವೂ ಕನ್ನಡಿಗರು ಎಂದು ಅವರು ಹೇಳಿದ್ದಾರೆ. ಆ ವಿಡಿಯೋ ಪರಿಶೀಲಿಸಿ, ತನಿಖೆಯಲ್ಲಿ ಸಾಕ್ಷಿಯಾಗಿ ಪರಿಗಣಿಸುತ್ತೇವೆ. ತಕ್ಷಣ ತನಿಖಾಧಿಕಾರಿಯನ್ನು ಬದಲಿಸಿ, ಪ್ರಕರಣವನ್ನು ಎಸಿಪಿಗೆ ವಹಿಸಿದ್ದೇವೆ. ಅದೇ ರೀತಿ ಈ ವಿಡಿಯೋ ಸಂಗ್ರಹಿಸಿ, ಮತ್ತೊಂದು ಹೇಳಿಕೆ ದಾಖಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿದ್ದೇನೆ. ಹಾಗೆಯೇ ಇನ್ನು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಮಾರಿಹಾಳ ಪೊಲೀಸ್ ಠಾಣೆ ಸಿಪಿಐ ಅವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದೆ. ಅವರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಹಿನ್ನೆಲೆ: ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಫೆ.21 ರಂದು ಬಸ್ ಕಂಡಕ್ಟರ್ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ (51) ಮೇಲೆ ಹಲ್ಲೆ ನಡೆದಿತ್ತು. ಟಿಕೆಟ್ ಕೊಡುವ ವೇಳೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿ ಹೊಡೆದಿದ್ದಾರೆ ಎಂದು ಕಂಡಕ್ಟರ್ ದೂರಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಬಸ್ ಕಂಡಕ್ಟರ್​ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡ ಮಾತಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಕಂಡಕ್ಟರ್ ಆರೋಪದ ಮೇಲೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಬೆನ್ನಲ್ಲೇ ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಇದು ಭಾರೀ ಸುದ್ದಿಯಾಗಿ, ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಕಂಡಕ್ಟರ್ ಮೇಲೆ ರಾತ್ರೋ ರಾತ್ರಿ ಪೋಕ್ಸೋ ಕೇಸ್: ಸಿಪಿಐ ಕರ್ತವ್ಯ ನಿಭಾಯಿಸಲು ವಿಫಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ

ಇದನ್ನೂ ಓದಿ: ಬೆಳಗಾವಿ: ಕನ್ನಡ ಮಾತಾಡಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಆರೋಪ - ಡಿಸಿಪಿ ಹೇಳಿದ್ದೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.