ETV Bharat / state

ಬೆಂಗಳೂರು: ಪತಿಯಿಂದ ಕಿರುಕುಳ ಆರೋಪ, ಪತ್ನಿ ಆತ್ಮಹತ್ಯೆ - Woman Commits Suicide - WOMAN COMMITS SUICIDE

ವಿಡಿಯೋ ಚಿತ್ರೀಕರಿಸುತ್ತಲೇ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆಂಧ್ರಹಳ್ಳಿಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಮಹಿಳೆ ಆತ್ಮಹತ್ಯೆ ಪ್ರಕರಣ (IANS)
author img

By ETV Bharat Karnataka Team

Published : Jul 29, 2024, 10:16 AM IST

Updated : Jul 29, 2024, 12:24 PM IST

ಬೆಂಗಳೂರು: ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಂಧ್ರಹಳ್ಳಿಯಲ್ಲಿ ನಡೆದಿದೆ. ಮಾನಸ (25) ಸಾವನ್ನಪ್ಪಿದವರು. ಆತ್ಮಹತ್ಯೆಗೆ ಶರಣಾಗುವ ಮುನ್ನ ವಿಡಿಯೋ ಮಾಡಿಟ್ಟಿದ್ದಾರೆ.

6 ವರ್ಷದ ಹಿಂದೆ ದಿಲೀಪ್ ಜೊತೆಗೆ ಮಾನಸ ವಿವಾಹವಾಗಿತ್ತು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗುವಿದೆ. ಕಳೆದ ಒಂದೂವರೆ ವರ್ಷದಿಂದ ಆತ ಬೇರೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇದೇ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಪತಿ ದಿಲೀಪ್ ಆಗಗ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು - BBMP Garbage Lorry Accident

Last Updated : Jul 29, 2024, 12:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.