ETV Bharat / state

ಬಿಎಂಟಿಸಿ ಬಸ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು, ಸ್ಥಳದಲ್ಲೇ ಸಾವು - BMTC BUS ACCIDENT

ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ​ ರಸ್ತೆಯಲ್ಲಿ ಸ್ಕೂಟರ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.

BMTC BUS Accident
ಬಿಎಂಟಿಸಿ ಬಸ್​-ಸ್ಕೂಟರ್ ಡಿಕ್ಕಿ (ETV Bharat)
author img

By ETV Bharat Karnataka Team

Published : Oct 8, 2024, 3:23 PM IST

Updated : Oct 8, 2024, 4:03 PM IST

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಗುದ್ದಿ ಮಹಿಳೆ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ‌ ಕೆಂಗೇರಿಯ ಉಲ್ಲಾಳ ಸಮೀಪದ 100 ಅಡಿ ರಸ್ತೆಯಲ್ಲಿ ನಡೆಯಿತು. ಸೊನ್ನೇನಹಳ್ಳಿಯ ಮಾರುತಿ ನಗರದ ನಿವಾಸಿ ಮೋನಿಕಾ (25) ಮೃತಪಟ್ಟಿದ್ದಾರೆ.

ಉಲ್ಲಾಳ ಸಮೀಪದ ರಿಂಗ್ ರಸ್ತೆಯಲ್ಲಿರುವ ಶೋರೂಂ​ವೊಂದರ ಹೆಚ್.ಆರ್.(ಮಾನವ ಸಂಪನ್ಮೂಲ ಅಧಿಕಾರಿ) ಆಗಿದ್ದ ಮೋನಿಕಾ, ಎಂದಿನಂತೆ ಬೆಳಿಗ್ಗೆ ತಮ್ಮ ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸ್ಕೂಟರ್‌ಗೆ ಮುಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಮೋನಿಕಾ ಮೈಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಹರಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಕೂಟರ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸಾವು (ETV Bharat)

ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಒಂದೇ ಬದಿಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿತ್ತು. ಈ ಅಪಘಾತದ ನಂತರ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್​ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

Last Updated : Oct 8, 2024, 4:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.