ETV Bharat / state

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ರಿಪ್ಪನ್‌ಪೇಟೆ ಮಹಿಳೆ ಸಾವು - Dengue Fever

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ  ರಶ್ಮಿ ಆರ್​​​.ನಾಯಕ್
ರಶ್ಮಿ ಆರ್​​​.ನಾಯಕ್ (ETV Bharat)
author img

By ETV Bharat Karnataka Team

Published : Jul 10, 2024, 9:33 AM IST

ಶಿವಮೊಗ್ಗ: ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿದ್ದಾರೆ. ರಶ್ಮಿ ಆರ್​​​.ನಾಯಕ್​(42) ಮೃತರು.

ರಿಪ್ಪನ್‌ಪೇಟೆಯ ನಾಯಕ್​​ ಫರ್ಟಿಲೈಸರ್ಸ್​ ಮಾಲೀಕ ರಾಮದಾಸ್ ನಾಯಕ್‌ ಎಂಬವರ ಪುತ್ರ ರಾಘವೇಂದ್ರ ನಾಯಕ್ ಅವರ ಪತ್ನಿ ರಶ್ಮಿ ಆರ್.ನಾಯಕ್, ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ರಿಪ್ಪನ್​ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಡೆಸಲಾದ ಪರೀಕ್ಷೆಯಲ್ಲಿ ಡೆಂಗ್ಯೂ ಪಾಸಿಟಿವ್ ಬಂದಿತ್ತು. ಚಿಕಿತ್ಸೆಯ ಬಳಿಕ ಮನೆಯಲ್ಲಿದ್ದ ರಶ್ಮಿ, ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ, ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು: ರಾಜ್ಯದಲ್ಲಿ ಮಂಗಳವಾರ 948 ಜನರ ಪರೀಕ್ಷೆ ನಡೆಸಲಾಗಿದ್ದು, 185 ಪ್ರಕರಣಗಳು ಪಾಸಿಟಿವ್​​ ಬಂದಿವೆ. 62 ಸಕ್ರಿಯ ಪ್ರಕರಣಗಳಿದ್ದು ರೋಗಿಗಳು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಶಿರಾಳಕೊಪ್ಪದಲ್ಲಿ ಡೆಂಗ್ಯೂ ಹೆಚ್ಚಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಸ್ಪತ್ರೆಗೆ ದಿಢೀರ್ ಭೇಟಿ, ಪರಿಶೀಲನೆ - B Y Vijayendra

ETV Bharat Logo

Copyright © 2024 Ushodaya Enterprises Pvt. Ltd., All Rights Reserved.