ETV Bharat / state

ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ: ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಜನನ - WOMAN GAVE BIRTH TO FOUR CHILDREN

ಮಂಗಳೂರು ನಗರದ ಕಂಕನಾಡಿ ಫಾದರ್​ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.

Medical team
ವೈದ್ಯಕೀಯ ತಂಡ (ETV Bharat)
author img

By ETV Bharat Karnataka Team

Published : Jan 6, 2025, 6:53 PM IST

ಮಂಗಳೂರು (ದಕ್ಷಿಣ ಕನ್ನಡ) : ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಮಹಿಳೆಯೊಬ್ಬರು ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದವರು. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನ್ಮ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಈಗ ಆರೋಗ್ಯವಾಗಿದ್ದಾರೆ‌‌. ಈ ಮಕ್ಕಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿವೆ. ಆದರೆ ಇದು 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

woman-gave-birth-to-four-children-at-father-muller-hospital
ಮಗುವಿಗೆ ಜನ್ಮ ನೀಡಿದ ತಾಯಿಯೊಂದಿಗೆ ವೈದ್ಯರ ತಂಡ (ETV Bharat)

ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ. ಸ್ತ್ರೀರೋಗತಜ್ಞೆ, ಡಾ. ಜೋಯ್ಲೀನ್ ಡಿಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದರು. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣವಾಗಿದೆ.

ಇದನ್ನೂ ಓದಿ : ಶಿವಮೊಗ್ಗ: ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ - ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಮಹಿಳೆ ಡಿಸ್ಚಾರ್ಜ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.