ETV Bharat / state

ಬೆಂಗಳೂರು: ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಪೊಲೀಸರಿಗೆ ಕರೆ ಮಾಡಿದ ತಾಯಿ - Children Murder - CHILDREN MURDER

ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

woman-kills-her-two-children-in-bengaluru
ಬೆಂಗಳೂರು: ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಾಯಿ
author img

By ETV Bharat Karnataka Team

Published : Apr 10, 2024, 9:43 AM IST

Updated : Apr 10, 2024, 11:18 AM IST

ಬೆಂಗಳೂರು: ತಾಯಿಯಿಂದಲೇ‌ ಇಬ್ಬರು ಮಕ್ಕಳು ಹತ್ಯೆಗೀಡಾದ ದಾರುಣ ಘಟನೆ ಮಂಗಳವಾರ ತಡರಾತ್ರಿ ಜಾಲಹಳ್ಳಿ‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮಹಿಳೆಯೇ ಪೊಲೀಸ್​ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ.

ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು, ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎನ್ನಲಾಗಿದೆ. ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿರುವ ಆರೋಪದ ಮೇಲೆ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲತಃ ಆಂಧ್ರಪ್ರದೇಶದವರಾದ ಗಂಗಾದೇವಿ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೆ, ಆಕೆಯ ಪತಿ ಬಿಬಿಎಂಪಿಯ ಗುತ್ತಿಗೆ ಆಧಾರದ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಮಾರ್ಚ್ ತಿಂಗಳಿನಲ್ಲಿ ಗಂಡನ ವಿರುದ್ಧ ಗಂಗಾದೇವಿಯೇ ನೀಡಿದ್ದ ದೂರಿನ ಅನ್ವಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಂಗಳವಾರ ಇಬ್ಬರು ಮಕ್ಕಳೊಂದಿಗೆ ಯುಗಾದಿ ಹಬ್ಬ ಆಚರಿಸಿದ್ದ ಗಂಗಾದೇವಿ, ತಡರಾತ್ರಿ ಮಕ್ಕಳಿಬ್ಬರನ್ನೂ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಗಲಾಟೆಯಾಗಿದೆ ಎಂದು ಪೊಲೀಸರ ನೆರವು ಕೇಳಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರ ಎದುರು ತಾನೇ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಗಂಗಾದೇವಿ ಒಪ್ಪಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

ಕುಟುಂಬ ನಿರ್ವಹಣೆಗೆ ಕಷ್ಟ ಆಗುತ್ತಿದ್ದುದರಿಂದ ಮಾನಸಿಕ ಒತ್ತಡಕ್ಕೊಳಪಟ್ಟು ಆರೋಪಿಯೇ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಡಾವತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇಸ್ಪೀಟ್ ಆಡುತ್ತಿದ್ದ ಬಾಮೈದುನನಿಗೆ ಚಾಕು ಇರಿದು ಕೊಂದ ಬಾವ - Murder

Last Updated : Apr 10, 2024, 11:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.