ETV Bharat / state

ಲಿಂಗಸೂಗೂರು: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಕೊಲೆ - Lingasuguru Woman Murder

ಕಲ್ಲಿನಿಂದ ಜಜ್ಜಿ ಮಹಿಳೆಯನ್ನು ಕೊಲೆ ಮಾಡಿರುವ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ.

woman murdered in lingasuguru
ಲಿಂಗಸೂಗೂರು: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಕೊಲೆ
author img

By ETV Bharat Karnataka Team

Published : Mar 11, 2024, 9:33 AM IST

ರಾಯಚೂರು: ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣ ಹಿಂದುಗಡೆ ಇರುವ ಎನ್.ಜಿ.ಒ. ಬಡಾವಣೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಯರಡೋಣ ನಿವಾಸಿ ವಿಜಯಲಕ್ಷ್ಮೀ ಸೋಮಪ್ಪ (32) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.

ಲಿಂಗಸೂಗೂರು ತಾಲೂಕಿನ ಅಂಕುಶದೊಡ್ಡಿ ಗ್ರಾಮದ ವ್ಯಕ್ತಿಗೆ ವಿಜಯಲಕ್ಷ್ಮೀ ವಿವಾಹ ಮಾಡಿಕೊಡಲಾಗಿತ್ತು. ಆದರೆ ಕಳೆದ ಎರಡು ವರ್ಷಗಳ ಹಿಂದೆ ಪತಿ ಮೃತಪಟ್ಟಿದ್ದ. ಹೀಗಾಗಿ, ತವರು ಮನೆ ಯರಡೋಣ ಗ್ರಾಮದಲ್ಲಿ ಮಹಿಳೆ ವಾಸಿಸುತ್ತಿದ್ದಳು. ಆದರೆ, ಭಾನುವಾರ ರಾತ್ರಿ ಕಲ್ಲಿನಿಂದ ಜಜ್ಜಿ ಮಹಿಳೆಯನ್ನ ಹತ್ಯೆ ಮಾಡಲಾಗಿದೆ. ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದ ಜನರಲ್ಲಿ ಆತಂಕ ಮೂಡಿದೆ.

ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಬೆಂಗಳೂರು: ಮದ್ಯ ಸೇವಿಸಿ ಮನೆಯಲ್ಲಿ ಕಿರಿಕಿರಿ ಮಾಡುತ್ತಿದ್ದ ಮಗನ ಹತ್ಯೆ ಮಾಡಿದ ತಂದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.