ETV Bharat / state

ಮೈಕ್ರೋ ಫೈನಾನ್ಸ್​​​ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ನೊಂದ ಮಹಿಳೆಯರಿಂದ ಅಭಿಯಾನ! - MICRO FINANCE TORTURE

ಹಾವೇರಿಯಲ್ಲಿ ಮೈಕ್ರೋ ಫೈನಾನ್ಸ್​ಗಳ ಕಾಟ ತಡೆಯಲಾರದೆ ಮಹಿಳೆಯರು ಮಾಂಗಲ್ಯ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ಅಂಚೆ ಮೂಲಕ ಸಿಎಂಗೆ ಮಾಂಗಲ್ಯ ಕಳುಹಿಸುವ ಮೂಲಕ ಮಹಿಳೆಯರು ಮನವಿ ಮಾಡಿದ್ದಾರೆ.

HAVERI  H D KUMARASWAMY  ಮೈಕ್ರೋ ಫೈನಾನ್ಸ್  BENGALURU MICRO FINANCE TORTURE
ಮೈಕ್ರೋ ಫೈನಾನ್ಸ್​​​ ಕಿರುಕುಳಕ್ಕೆ ಮಾಂಗಲ್ಯವನ್ನೇ ಸಿಎಂಗೆ ಪೋಸ್ಟ್ ಮಾಡುತ್ತಿರುವ ಮಹಿಳೆಯರು (ETV Bharat)
author img

By ETV Bharat Karnataka Team

Published : Jan 24, 2025, 8:17 AM IST

ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್​ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್​​​ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ.

ಹೌದು.. ಮೈಕ್ರೋ ಫೈನಾನ್ಸ್​​ನಿಂದ ತಮ್ಮ ಮಾಂಗಲ್ಯಕ್ಕೆ ಕುತ್ತು ಬಂದಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಹಾವೇರಿ ಪ್ರಧಾನ ಅಂಚೆ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು, ಅಂಚೆ ಮೂಲಕ ಮಾಂಗಲ್ಯ ಮತ್ತು ಪತ್ರವನ್ನು ಸಿಎಂ ಸಿದ್ದರಾಮಯ್ಯರಿಗೆ ಪೋಸ್ಟ್ ಮಾಡಿ, ನಮ್ಮ ಮಾಂಗಲ್ಯವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮೈಕ್ರೋ ಫೈನಾನ್ಸ್​​​ ಕಿರುಕುಳ: ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ನೊಂದ ಮಹಿಳೆಯರಿಂದ ಅಭಿಯಾನ! (ETV Bharat)

ಬಳಿಕ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ ಸಹ ಮಾಂಗಲ್ಯ ಪತ್ರವನ್ನು ನೀಡಿದ್ದಾರೆ. ವಿನಾಕಾರಣ ನಿತ್ಯ ಮನೆಗೆ ಬಂದು ಕಿರಕುಳ ನೀಡುವ ಮೈಕ್ರೋ ಫೈನಾನ್ಸ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮಹಿಳೆಯರು ಒತ್ತಾಯಿಸಿ, ಅವರ ಕಾಟದಿಂದ ಮುಕ್ತಿ ಕೊಡುವಂತೆ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ‌ ಮನವಿ ಸ್ವೀಕರಿಸಿರುವ ಜಿಲ್ಲಾಡಳಿತ, ಮೈಕ್ರೋ ಫೈನಾನ್ಸ್​ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದೆ.

ಮೈಕ್ರೋ ಫೈನಾನ್ಸ್​ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು-ಹೆಚ್​ಡಿಕೆ:

ಮೈಕ್ರೋ ಫೈನಾನ್ಸ್​ಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಹೆಚ್​.ಡಿ. ಕುಮಾರಸ್ವಾಮಿ (ETV Bharat)

ರಾಜ್ಯದಲ್ಲಿ ಹೆಚ್ಚಿದ ಮೈಕ್ರೋ ಫೈನಾನ್ಸ್​ಗಳ ಕಿರುಕುಳಕ್ಕೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಮತ್ತು ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

"ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್​ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು" ಎಂದು ರಾಜ್ಯ ಸರ್ಕಾರವನ್ನು ಹೆಚ್​ಡಿಕೆ ಆಗ್ರಹಿಸಿದ್ದಾರೆ.

"ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರ್ಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ನಾಗರಿಕ ಸರ್ಕಾರ, ಗೃಹ ಸಚಿವರು ಎನ್ನುವವರು ಇದ್ದಾರೆಯೇ?. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಕಿಡಿಗೇಡಿ ಫೈನಾನ್ಸ್​ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು 'ಋಣಮುಕ್ತ ಕಾಯ್ದೆ' ಜಾರಿಗೆ ತಂದೆ. ನನ್ನ ಸರ್ಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು" ಎಂದು ಅವರು ಬೇಸರ ವ್ಯಕ್ತಪಡಿಸಿದರು.

"ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ. ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು?" ಎಂದು ಅವರು ಪ್ರಶ್ನಿಸಿದರು.

"ನನ್ನ ಸರ್ಕಾರ ಹೋದ ನಂತರ ಬಂದ ಸರ್ಕಾರಗಳು ಈ ಕಾಯ್ದೆಯ ಮಹತ್ವವನ್ನೇ ಅರಿತುಕೊಳ್ಳಲಿಲ್ಲ. ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್​ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಅಥವಾ ಅನುಮತಿಯನ್ನೇ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ" ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

"ಚಾಮರಾಜನಗರ ಜಿಲ್ಲೆಯಲ್ಲಿ ಜನರು ಹಳ್ಳಿಗಳನ್ನು ಬಿಟ್ಟಿದ್ದರು. ಮನೆಗಳಿಗೆ ಬೀಗ ಹಾಕಿ ಸಾಲಗಾರರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಭೀತಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇಪದೆ ಹೇಳುತ್ತಾರೆ, ನಾನು ಇಪ್ಪತ್ತು ಸಲವೋ ಮೂವತ್ತು ಸಲವೋ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ? ಅವರನ್ನು ಗಟ್ಟಿ ಮಾಡಲಿಕ್ಕೆ ಏನು ಮಾಡಿದ್ದೀರಿ?" ಎಂದು ಹೆಚ್​ಡಿಕೆ ಪ್ರಶ್ನಿಸಿದರು.

ಇವುಗಳನ್ನೂ ಓದಿ

ಮೈಕ್ರೋ ಫೈನಾನ್ಸ್​ಗಳ ಕಿರುಕುಳ ಆರೋಪ; ಊರು ತೊರೆಯುತ್ತಿರುವ ಜನ

ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಜನ: ಕಣ್ಣೀರಿಟ್ಟ ಬಾಲಕ

ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು: ಪ್ರಗತಿಪರ ಸಂಘಟನೆಗಳ ಒತ್ತಾಯ

ರಾಜ್ಯದಲ್ಲಿ ಹೆಚ್ಚಿದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ: ಜ.25ಕ್ಕೆ ಸಿಎಂ ನೇತೃತ್ವದಲ್ಲಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.