ETV Bharat / state

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಮುಚ್ಚಿಹಾಕುವ ಹುನ್ನಾರ: ಸಚಿವ ಕೃಷ್ಣ ಬೈರೇಗೌಡ - Prajwal pen drive case - PRAJWAL PEN DRIVE CASE

ಜೆಡಿಎಸ್​,ಬಿಜೆಪಿ ನಾಯಕರ ವಿರುದ್ಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಟೀಕಿಸಿದರು.

Minister Krishnabyre gowda spoke at a press conference.
ಸಚಿವ ಕೃಷ್ಣಭೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. (Etv Bharat)
author img

By ETV Bharat Karnataka Team

Published : May 8, 2024, 9:34 PM IST

Updated : May 8, 2024, 10:23 PM IST

ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. (ETV Bharat)

ಬೆಂಗಳೂರು: ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ, ಮಾನಹರಣ ಪ್ರಕರಣ ಇದಾಗಿದೆ. ಆದರೆ, ಈ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ಒಕ್ಕಲಿಗ ಸಮುದಾಯದ ಸಚಿವರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ದಾರಿ ತಪ್ಪಿಸುವುದು ಎಷ್ಟರ ಮಟ್ಟಿಗೆ ಸರಿ. ಇದನ್ನು ನಿಲ್ಲಿಸಬೇಕು. ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ, ಇದರ ವಿರುದ್ದ ಮಾತನಾಡಿದ್ದು ಅಪರಾಧವಾಗಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತವಾಗಿ ಸಂಚು ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಸಂತ್ರಸ್ತರ ಮಾನ ಹರಣವಾಗಿದೆ ಜೊತೆಗೆ ನ್ಯಾಯ ಹರಣವೂ ಮಾಡಲಾಗುತ್ತಿದೆ ಎಂದ ಅವರು, ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಿತ್ತು, ಆದರೆ, ಬೇರೆಯದೇ ವಿಚಾರ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಕರಣದ ಆರೋಪಿ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ಮುಖಂಡನಿಗೆ ಪೆನ್ ಡ್ರೈವ್ ಕೊಟ್ಟನು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲೆ ಆಗಿದೆ. ಇದನ್ನು ತೆಗೆದುಕೊಂಡವನು ವಕೀಲ, ನ್ಯಾಯದ ಬಗ್ಗೆ ಪುಂಖಾನು ಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಡಿಜಿಪಿ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜು ಆಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯ ನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ ಎಂದು ಹೇಳಿದರು.

ನೂರಾರು ಮಹಿಳೆಯರ ಮಾನಹರಣ: ಇಂತಹ ಬ್ಲಾಕ್ ಮೇಲ್ ಮಾಡುವ ವ್ಯಕ್ತಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಚರ್ಚೆ ಮಾಡಿದವರು ಹಾಸನಾಂಭ ದೇವಸ್ಥಾನಕ್ಕೆ ಬಂದು ದೇವರ ಮೇಲೆ ಕೈಯಿಟ್ಟು ಚರ್ಚೆ ಮಾಡಲಿ. ಟಿಕೆಟ್ ತಪ್ಪಿಸಲು ಇದನ್ನು ಬಳಸಿಕೊಂಡರು. ನೂರಾರು ಮಹಿಳೆಯರ ಮಾನ ಹರಣ ಆಗಿರುವುದೇ ಇವರಿಂದ, ಬಿಜೆಪಿಯವರು ಇವರ ಬಳಿ ಇರುವ ಅಷ್ಟು ಮತಗಳನ್ನು ಹಾಕಿಸಿಕೊಂಡು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿ ಅವರ ಹೇಳಿಕೆ ಇದೇ ರೀತಿ ಇವೆ. ಜೆಡಿಎಸ್ ವಿರುದ್ದ ಮಾತನಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಅಪಹರಣ ಮಾಡಿದ್ದು ಸುಳ್ಳು ಎಂದು ಹೇಳುತ್ತಾರೆ ಇವರು. ಇವರುಗಳು ಏನೂ ಮಾಡಿದರೂ ನಡೆಯುತ್ತದೆ. ಕಾನೂನಿಗಿಂತ, ಸಂವಿಧಾನಕ್ಕಿಂತ ಮೇಲೆ ಎಂದುಕೊಂಡಿದ್ದಾರೆ. ಅವರ ಕುಟುಂಬದಲ್ಲಿ ಒಬ್ಬರಾದರೂ ಈ ಘಟನೆಯನ್ನು ಖಂಡಿಸಿಲ್ಲ. ಎಲ್ಲಿಯೊ ಇರುವ ಅವನನ್ನು ಕರೆಸಿ ಕಸ್ಟಡಿಗೆ ಒಳಗಾಕಲು ಹೇಳಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಎಸ್​​​ಐಟಿ ತನಿಖೆ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ದೇವರಾಜೇಗೌಡ ಅವರು ಕಳೆದ ಒಂದು ವರ್ಷದಿಂದ ಅನೇಕ ಹೇಳಿಕೆಗಳನ್ನು ಗಮನಿಸುತ್ತ ಹೋಗಬೇಕು. ಈತ ಎಸ್ ಐಟಿ ತನಿಖೆ ಪ್ರಾರಂಭ ಆದ ಕಾರಣಕ್ಕೆ ಹಾಗೂ ಇದರಿಂದ ಆತನಿಗೆ ತೊಂದರೆ ಎಂದು ಗೊತ್ತಾಗಿ ವಿರುದ್ದವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು. ಎಸ್ ಐಟಿ ಸತ್ಯವನ್ನು ಹೊರಗೆ ತರುತ್ತದೆ. ಅಲ್ಲದೇ ಸಿಬಿಐಗೆ ಈ ಪ್ರಕರಣ ಕೊಟ್ಟರೆ ಕೋಲ್ಡ್ ಸ್ಟೋರೇಜ್ ಗೆ ಸೇರುತ್ತದೆ ಎಂದು ಹೀಗೆ ಮಾಡಲಾಗುತ್ತಿದೆ. ಇಂತಹ ಹೀನ ಕೆಲಸ ನಮ್ಮ ಜಾತಿಯವರಿಂದ ಆಗಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಟೀಕಿಸಿದರು.

ಇದನ್ನೂಓದಿ:ಮೇ 14ರವರೆಗೂ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ - H D REVANNA

Last Updated : May 8, 2024, 10:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.