ETV Bharat / state

ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಹರುಷ: ಹತ್ತು ಹಲವು ಸವಾಲಿನ ಮಧ್ಯೆ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ - ONE YEAR FOR CONGRESS GOVT - ONE YEAR FOR CONGRESS GOVT

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು, ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಿತು.

Griha Lakshmi implemented by the Congress government
ಕಾಂಗ್ರೆಸ್ ಸರ್ಕಾರ ಗೃಹ ಲಕ್ಷ್ಮಿ ಜಾರಿಗೊಳಿಸಿರುವ ಚಿತ್ರ (ETV Bharat)
author img

By ETV Bharat Karnataka Team

Published : May 20, 2024, 7:22 AM IST

ಬೆಂಗಳೂರು: ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವರ್ಷದ ಹರುಷದಲ್ಲಿದೆ. ತನ್ನ ಒಂದು ವರ್ಷದ ಆಡಳಿತ ಬಹುವಾಗಿ ಪಂಚ ಗ್ಯಾರಂಟಿಗಳ ಅನುಷ್ಠಾನ, ನಿರ್ವಹಣೆ ಕೇಂದ್ರೀಕೃತವಾಗಿತ್ತು. ವರ್ಷ ಪೂರೈಸುತ್ತಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಹೊರೆಯ ಸವಾಲಿನೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸುತ್ತಿದೆ. ಚುನಾವಣೆಯಲ್ಲಿ ಪ್ರಚಂಡ ಬಹುಮತ ಗಳಿಸಿ ರಾಜ್ಯದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ವರ್ಷದ ಹರುಷದಲ್ಲಿದೆ. ಒಂದು ವರ್ಷ ಪೂರೈಸುತ್ತಿರುವ ಸಿದ್ದರಾಮಯ್ಯ ಸರ್ಕಾರ ತಮ್ಮ ಚುನಾವಣೆಯ ಭರವಸೆಯ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೇ ಬಹು ಮುಖ್ಯವಾಗಿ ಆದ್ಯತೆ ನೀಡಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ ಹಾಗೂ ಯುವನಿಧಿ ಯೋಜನೆ ಜಾರಿಗೆ ಹೆಚ್ಚು ಕಸರತ್ತು ನಡೆಸಿದೆ.‌

ಒಂದು ವರ್ಷದಲ್ಲಿ ಪಂಚ ಗ್ಯಾರಂಟಿಗಳಿಗೆ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಸಾಕಷ್ಟು ಕಸರತ್ತು ನಡೆಸಿದೆ. ವಾರ್ಷಿಕ ಸುಮಾರು 40 ಸಾವಿರ ಕೋಟಿ ರೂ. ವೆಚ್ಚದ ಈ ಪಂಚ ಗ್ಯಾರಂಟಿಗಳಿಗೆ ಆದಾಯ ಸಂಗ್ರಹ ಕಾಂಗ್ರೆಸ್ ಸರ್ಕಾರಕ್ಕೆ ಸವಾಲಿನ ವಿಚಾರವಾಗಿತ್ತು. ಹೆಚ್ಚಿನ ಗೊಂದಲ‌ ಇಲ್ಲದೆ ಪಂಚ ಗ್ಯಾರಂಟಿ ಅನುಷ್ಠಾನ ಜೊತೆಗೆ ರಾಜ್ಯದ ಅಭಿವೃದ್ಧಿಗೂ ವೇಗ ನೀಡುವ ಅನಿವಾರ್ಯತೆ ಕಾಂಗ್ರೆಸ್ ಸರ್ಕಾರದ್ದಾಗಿತ್ತು.

ಗ್ಯಾರಂಟಿ ಅನುದಾನ ಹೊಂದಾಣಿಕೆಯದ್ದೇ ಕಸರತ್ತು : ಒಂದು ವರ್ಷದ ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯಗೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತರಲು ಸಂಪನ್ಮೂಲ ಕೂಡಿಸುವುದು ದೊಡ್ಡ ಸವಾಲು ಆಗಿತ್ತು. ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಮೊದಲ ವರ್ಷ ಸುಮಾರು 40,000 ಕೋಟಿ ರೂ. ಅಗತ್ಯವಿತ್ತು. ಇಷ್ಟು ದೊಡ್ಡ ಪ್ರಮಾಣದ ಅನುದಾನ ಸಂಗ್ರಹದ ಬಗ್ಗೆ ಹಣಕಾಸು ಇಲಾಖೆಯೂ ತನ್ನ ಅಸಹಾಯಕತೆ ವ್ಯಕ್ತಪಡಿಸಿತ್ತು. ಇದರಿಂದ ರಾಜ್ಯದ ಹಣಕಾಸು ಪರಿಸ್ಥಿತಿ ಬಿಗಡಾಯಿಸಲಿದ್ದು, ಅಭಿವೃದ್ಧಿ ಕೆಲಸಗಳು ಕುಂಠಿತವಾಗುವ ಆತಂಕ ಇತ್ತು. ಇದರ‌ ಮಧ್ಯೆ ರಾಜ್ಯಕ್ಮೆ ಎದುರಾದ ಭೀಕರ ಬರಗಾಲ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆಯಿತು.

ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಬಹುವಾಗಿ ಸಂಪನ್ಮೂಲ ಕ್ರೋಢೀಕರಣದ ಕಸರತ್ತಿನಲ್ಲೇ ತೊಡಗಿತು. ಆದಾಯ ಸಂಗ್ರಹ ನಿರೀಕ್ಷಿತ ಪ್ರಮಾಣದಲ್ಲಿ ಸಾಧ್ಯವಾಗದಿರುವುದು ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಉಂಟು ಮಾಡಿತು. ಗ್ಯಾರಂಟಿ ಕಾರಣ ಇತರ ಇಲಾಖೆಗಳಿಗೆ ಅನುದಾನ ಕಡಿತ ಮಾಡುವ ಮೂಲಕ ಹಣ ಹೊಂದಾಣಿಕೆ ಕಸರತ್ತು ಮಾಡಲಾಯಿತು.‌ ಇತ್ತ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊರತೆ ಎದುರಾದ ಕಾರಣ ಸ್ವಪಕ್ಷೀಯರೇ ಬಹಿರಂಗ ಅಸಮಾಧಾನ ಹೊರಹಾಕಲು ಆರಂಭಿಸಿದ್ದರು.

ಸ್ವಪಕ್ಷೀಯರ ಅಸಮಾಧಾನ ತಣಿಸಿ, ಅಭಿವೃದ್ಧಿಗೂ ಚ್ಯುತಿ ಬಾರದಂತೆ ಪಂಚ ಗ್ಯಾರಂಟಿ ಜಾರಿಗೊಳಿಸುವ ಅನಿವಾರ್ಯತೆ, ಸವಾಲಿನಲ್ಲೇ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಆಡಳಿತವನ್ನು ಪೂರೈಸಿದೆ. ಬರದ ಹೊರೆ, ಆದಾಯ ಕೊರತೆಯ ಮಧ್ಯೆ ಕಸರತ್ತು ನಡೆಸಿ ಪಂಚ ಗ್ಯಾರಂಟಿಗೆ ಚ್ಯುತಿ ಬಾರದಂತೆ ತನ್ನ ಒಂದು ವರ್ಷದ ಆಡಳಿತದಲ್ಲಿ ಹಣ ಹೊಂದಿಸುವಲ್ಲಿ ಯಶಸ್ಸು ಕಂಡಿದೆ.

ಶಕ್ತಿ ಯೋಜನೆಗೆ ಅನುದಾನ ಬಿಡುಗಡೆ : ಶಕ್ತಿ ಯೋಜನೆಗೆ ಸರ್ಕಾರ 2023-24 ಸಾಲಿನ ತನ್ನ ಮೊದಲ ವರ್ಷದಲ್ಲಿ ಒಟ್ಟು 2,800 ಅನುದಾನ ಹಂಚಿಕೆ ಮಾಡಿದೆ. ಜೂನ್ 11 2023ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸರ್ಕಾರ ಆರಂಭಿಸಿತು. ಮಾರ್ಚ್ ಅಂತ್ಯದವರೆಗೆ ಶಕ್ತಿ ಯೋಜನೆಯಡಿ ಸುಮಾರು 190 ಕೋಟಿ (ಒಟ್ಟು ಸಂಚಾರ) ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಪ್ರಯಾಣಿಸಿದ್ದಾರೆ.

ಕೆಡಿಪಿ ಪ್ರಗತಿ ವರದಿ ಪ್ರಕಾರ ಹಣಕಾಸು ವರ್ಷದ ಮಾರ್ಚ್ ಅಂತ್ಯದವರೆಗೆ ಶಕ್ತಿ ಯೋಜನೆಗಾಗಿ ಅಂದಾಜಿಗಿಂತ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕಾಯಿತು. ಒಟ್ಟು 3,200 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕಾಯಿತು. 2023-24 ಹಣಕಾಸು ವರ್ಷ ಅಂತ್ಯಕ್ಕೆ ಯೋಜನೆಗಾಗಿ 3,200 ಕೋಟಿ ರೂ‌. ವರೆಗೆ ವೆಚ್ಚವಾಗಿದೆ. ಹೀಗಾಗಿ ಸರ್ಕಾರ ಬಜೆಟ್ ಅಂದಾಜಿಗಿಂತ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕಾಯಿತು.

ಅನ್ನಭಾಗ್ಯಕ್ಕೆ ಹಣ ಬಿಡುಗಡೆ ಎಷ್ಟು : ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕೊರತೆ ಹಿನ್ನೆಲೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಕೆ.ಜಿ. ಅಕ್ಕಿ ಬದಲು ನಗದು ನೀಡುವ ವ್ಯವಸ್ಥೆಯನ್ನು ವರ್ಷ ಪೂರ್ತಿ ಮುಂದುವರಿಸಬೇಕಾಯಿತು. ರಾಜ್ಯದ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರದಾರರಿಗೆ ಅಕ್ಕಿ ಕೊರತೆ ಎದುರಾದ ಕಾರಣ ಸರ್ಕಾರ ಜುಲೈ 10ರಿಂದ ಫಲಾನುಭವಿಗಳ ಖಾತೆಗೆ ಅಕ್ಕಿ ಬದಲು ನಗದು ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿತು. ಪ್ರತಿ ಕೆ ಜಿಗೆ ರೂ.34 ರೂ.ರಂತೆ ಮಾಸಿಕ 170 ರೂ.‌ ನಗದು ಹಣವನ್ನು ಪಡಿತರ ಫಲಾನುಭವಿಯ ಕುಟುಂಬದ ಮುಖ್ಯಸ್ಥರ ಬ್ಯಾಂಕ್‌ ಖಾತೆಗೆ DBT ಮೂಲಕ ವರ್ಗಾಯಿಸಲಾಗುತ್ತಿದೆ.

ರಾಜ್ಯದಲ್ಲಿ 10,89,990 ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿದ್ದರೆ, 1,17,26,296 ಆದ್ಯತಾ ಪಡಿತರ ಚೀಟಿದಾರರಿದ್ದಾರೆ. ಒಟ್ಟು 4.42 ಕೋಟಿ ಕುಟುಂಬ ಸದಸ್ಯರು ಇದರ ಫಲಾನುಭವಿಗಳಾಗಿದ್ದಾರೆ. ಅನ್ನಭಾಗ್ಯಕ್ಕೆ ರಾಜ್ಯ ಸರ್ಕಾರ ಒಟ್ಟು 10,265 ಕೋಟಿ ರೂ. ಹಂಚಿಕೆ ಮಾಡಿತು. ಈ ಪೈಕಿ ಬಜೆಟ್ ವರ್ಷ ಮಾರ್ಚ್ 2024 ಅಂತ್ಯದವರೆಗೆ 7,397 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ ಮೊದಲ ಆರ್ಥಿಕ ವರ್ಷದಲ್ಲಿ 7,344 ಕೋಟಿ ರೂ. ವೆಚ್ಚವಾಗಿದೆ. ಮಾಸಿಕ ಸುಮಾರು 600-655 ಕೋಟಿ ರೂ. ವರೆಗೆ ಫಲಾನುಭವಿಗಳ ಖಾತೆಗೆ ಡಿಬಿಟಿ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಗೃಹ ಜ್ಯೋತಿಗೆ ಅನುದಾನ: 200 ಯುನಿಟ್ ವರೆಗಿನ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗಾಗಿ 2023-24 ಸಾಲಿನಲ್ಲಿ 9,000 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿತ್ತು. ಜುಲೈ ತಿಂಗಳಿಂದ ಈ ಯೋಜನೆಗೆ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿತ್ತು. ಹಿಂದಿನ ವರ್ಷದ ಸರಾಸರಿ ಆಧಾರದ ಮೇಲೆ ವಿದ್ಯುತ್ ಬಳಕೆಯ ಯುನಿಟ್ ಲೆಕ್ಕ ಹಾಕಲಾಗುತ್ತಿದೆ.‌

ಗೃಹ ಜ್ಯೋತಿ ಯೋಜನೆಗೆ ಆರ್ಥಿಕ ವರ್ಷ ಅಂತ್ಯ ಮಾರ್ಚ್​ವರೆಗೆ 8,900 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮಾರ್ಚ್​ವರೆಗೆ ಯೋಜನೆಯಡಿ ಮಾಡಲಾದ ವೆಚ್ಚ 8,900 ಕೋಟಿ ರೂ. ಎಂದು ಕೆಡಿಪಿ ವರದಿಯಲ್ಲಿ ತಿಳಿಸಲಾಗಿದೆ.

ಗೃಹ ಲಕ್ಷ್ಮಿ ಯೋಜನೆಗೆ ಬಿಡುಗಡೆಯಾಗಿದ್ದೆಷ್ಟು : ಇನ್ನು ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಗಾಗಿ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ 17,500 ಕೋಟಿ ರೂ. ಅನುದಾನ ಹಂಚಿಕೆ ಮಾಡಿತು. ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2,000 ರೂ. ಜಮೆ ಮಾಡಲಾಗುತ್ತಿದೆ. ಆಗಸ್ಟ್ ತಿಂಗಳಿಂದ ಈ ಯೋಜನೆ ಜಾರಿಯಾಗಿದ್ದು, ಸುಮಾರು 1.28 ಕೋಟಿ ಯಜಮಾನಿಗಳು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

2023-24 ಬಜೆಟ್ ವರ್ಷದ ಅಂತ್ಯದವರೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ ಸರ್ಕಾರ ಒಟ್ಟು 17,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತು. ಈ ಯೋಜನೆಗಾಗಿ ಮಾರ್ಚ್ 2024, ಅಂತ್ಯದವರೆಗೆ ಒಟ್ಟು 16,964 ಕೋಟಿ ರೂ. ವೆಚ್ಚವಾಗಿದೆ.

ಯುವನಿಧಿ ಯೋಜನೆ: ಕಾಂಗ್ರೆಸ್ ಸರ್ಕಾರ ತನ್ನ ಕೊನೆಯ ಗ್ಯಾರಂಟಿಯಾದ ಯುವನಿಧಿಗೆ 2024ರ ಜನವರಿಯಲ್ಲಿ ಚಾಲನೆ ನೀಡಿತು. ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ಪ್ರತಿ ತಿಂಗಳು ರೂ.3,000, ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ರಂತೆ ನಿರುದ್ಯೋಗ ಭತ್ಯೆ ನೀಡುವ "ಯುವ ನಿಧಿ ಯೋಜನೆ" ಯನ್ನು ಶಿವಮೊಗ್ಗದಲ್ಲಿ ಜಾರಿಗೊಳಿಸಲಾಗಿತ್ತು.

ಎರಡು ವರ್ಷಗಳವರೆಗೆ ಈ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. 2023-24 ವರ್ಷದಲ್ಲಿ ಯುನಿಧಿಗೆ 250 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಮಾರ್ಚ್ ಅಂತ್ಯಕ್ಕೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. 2023-24 ಅಂತ್ಯದವರೆಗೆ ಒಟ್ಟು 89 ಕೋಟಿ ರೂ. ವರೆಗೆ ವೆಚ್ಚವಾಗಿದೆ.

ಇದನ್ನೂಓದಿ:'ಕರ್ನಾಟಕ ಮಾದರಿ ಆಡಳಿತ' ಸೂತ್ರದೊಂದಿಗೆ ವರ್ಷ ಪೂರೈಸಿದ ಕಾಂಗ್ರೆಸ್ ಸರ್ಕಾರ - ONE YEAR FOR CONGRESS GOVT

ETV Bharat Logo

Copyright © 2025 Ushodaya Enterprises Pvt. Ltd., All Rights Reserved.