ETV Bharat / state

ದಾವಣಗೆರೆ: ಮತದಾನ ಬಹಿಷ್ಕರಿಸಿ, ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿದ ಗ್ರಾಮಸ್ಥರು - Election Boycott - ELECTION BOYCOTT

ಗ್ರಾಮದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಲ್ಲ ಎಂದು ಆರೋಪಿಸಿ ದಾವಣಗೆರೆಯ ಎಲ್ಲಮ್ಮನಗರ ಗ್ರಾಮಸ್ಥರು ಲೋಕಸಭೆ ಚುನಾವಣೆಯ ಮತದಾನ ಬಹಿಷ್ಕರಿಸಿದ್ದಾರೆ.

ಮತದಾನ ಬಹಿಷ್ಕಾರ
ಮತದಾನ ಬಹಿಷ್ಕಾರ (ETV Bharat)
author img

By ETV Bharat Karnataka Team

Published : May 7, 2024, 11:35 AM IST

Updated : May 7, 2024, 12:34 PM IST

ದಾವಣಗೆರೆ: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಯ ಭಾಗವಾಗಿ ಇಂದು 14 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ ದಾವಣಗೆರೆ ಕ್ಷೇತ್ರದ ವ್ಯಾಪ್ತಿಯ ಎಲ್ಲಮ್ಮನಗರ ಮತಗಟ್ಟೆಯ ಜನರು ಮತದಾನ ಬಹಿಷ್ಕರಿಸಿದ್ದಾರೆ.

ಇಲ್ಲಿಯ ಲೋಕಿಕೆರೆ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಎಲ್ಲಮ್ಮನಗರದಲ್ಲಿ ಒಟ್ಟು 500 ಮತದಾರರಿದ್ದಾರೆ. ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಮತದಾನದಿಂದ ಹಿಂದೆ ಸರಿದಿದ್ದಾರೆ. ಮತದಾನ ಬಹಿಷ್ಕರಿಸಿದ ಗ್ರಾಮಸ್ಥರನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಮನವೊಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡುವವರೆಗೂ ಯಾವುದೇ ಕಾರಣಕ್ಕೂ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದರೂ ಕೂಡ ಎಲ್ಲಮ್ಮನಗರ ಗ್ರಾಮದ ಮತಗಟ್ಟೆಯಲ್ಲಿ ಒಂದೂ ಮತ ಕೂಡ ಚಲಾವಣೆ ಆಗಿಲ್ಲ‌.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ಕಾಂಗ್ರೆಸ್​ ಅಭ್ಯರ್ಥಿ ವಿನೋದ್ ಅಸೂಟಿ ಮತದಾನ - Pralhad Joshi Casts Vote

Last Updated : May 7, 2024, 12:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.