ETV Bharat / state

ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್​ ಘೋಷಣೆ - Yellow Alert

author img

By ETV Bharat Karnataka Team

Published : 2 hours ago

ಕರಾವಳಿ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

YELLOW ALERT
ಮಳೆಯಲ್ಲಿ ವಾಹನ ಸಂಚಾರದ ಸಂಗ್ರಹ ಚಿತ್ರ (IANS)

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗು ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಹಾಗು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ರಾಮನಗರ, ಕೋಲಾರ, ಕೊಡಗು, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಹಾಗು ಬಾಗಲಕೋಟೆಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲು, ಆಗಾಗ ಮೋಡ ಕವಿದ ವಾತಾವರಣವಿದೆ. 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: ಮುಂಗಾರು ಅಂತ್ಯಕ್ಕೆ ಇನ್ನೊಂದೇ ದಿನ ಬಾಕಿ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.