ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ನವೆಂಬರ್ 14ರಿಂದ ಮಳೆಯಾಗಲಿದ್ದು ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ಚಿತ್ರದುರ್ಗ, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಗದಗ, ಬೆಳಗಾವಿ, ಬೀದರ್, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರಿನಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: ಇಳಿದ 'ಬಿಳಿ ಬಂಗಾರ'ದ ಬೆಲೆ: ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವಂತೆ ಸರ್ಕಾರಕ್ಕೆ ರೈತರ ಆಗ್ರಹ