ETV Bharat / state

ಮೈಸೂರು ದಸರಾ: ಯೋಗ ಸರಪಳಿಯಲ್ಲಿ 4000ಕ್ಕೂ ಅಧಿಕ ಜನರು ಭಾಗಿ - Yoga In Mysuru Dasara

ಮೈಸೂರು ದಸರಾದಲ್ಲಿ ಸೋಮವಾರ ಅರಮನೆ ಆವರಣದಲ್ಲಿ 'ಯೋಗ ಸರಪಳಿ-ಪ್ರಜಾಪ್ರಭುತ್ವಕ್ಕಾಗಿ ಯೋಗ' ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

yoga
ಮೈಸೂರು ದಸರಾದಲ್ಲಿ ಯೋಗ ಕಾರ್ಯಕ್ರಮ (ETV Bharat)
author img

By ETV Bharat Karnataka Team

Published : Oct 7, 2024, 1:05 PM IST

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ 5ನೇ ದಿನವಾದ ಇಂದು ಯೋಗ ದಸರಾ ಉಪ ಸಮಿತಿ ವತಿಯಿಂದ ಅರಮನೆಯ ಆವರಣದಲ್ಲಿ 'ಯೋಗ ಸರಪಳಿ-ಪ್ರಜಾಪ್ರಭುತ್ವಕ್ಕಾಗಿ ಯೋಗ' ಕಾರ್ಯಕ್ರಮ ನಡೆಯಿತು.

ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷ ಎಂ.ಮಹೇಶ್ ಸಮಾರಂಭವನ್ನು ಉದ್ಘಾಟನೆ ಮಾಡಿದರು. ಯೋಗ ಸರಪಳಿಯಲ್ಲಿ ಯೋಗಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಮೈಸೂರಿನ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 4,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಬೆಳಗ್ಗೆ 6 ಗಂಟೆಗೆ ಅರಮನೆಯ ಮೈದಾನದಲ್ಲಿ ಸಾವಿರಾರು ಜನರು ನೆರೆದಿದ್ದರು. ಈ ದೃಶ್ಯವು ಯೋಗದ ತವರೂರು ಎನಿಸಿಕೊಳ್ಳುವ ಮೈಸೂರಿನ ಸೊಬಗನ್ನು ಹೆಚ್ಚಿಸಿತು.

ಮೈಸೂರು ದಸರಾ ಯೋಗ ಸರಪಳಿ (ETV Bharat)

ಸಂವಿಧಾನದ ಪೀಠಿಕೆ ಬೋಧನೆ, ಪ್ರಜಾಪ್ರಭುತ್ವದ ಆಶಯಗಳನ್ನು ಸಾರಿದ ಯೋಗ ಗುಚ್ಛ ಪ್ರದರ್ಶನ, ಯೋಗ ಗುಚ್ಛ ನೃತ್ಯ, ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಯೋಗ ನೃತ್ಯ ಪ್ರದರ್ಶನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಜನರು ಕಣ್ತುಂಬಿಕೊoಡರು.

yoga
ಮೈಸೂರು ದಸರಾದಲ್ಲಿ ಯೋಗ ಕಾರ್ಯಕ್ರಮ (ETV Bharat)

ಯೋಗ ಸರಪಳಿ ಸೇರಿ ವಿವಿಧ ಭಂಗಿಗಳ ಪ್ರದರ್ಶನ: ಯೋಗಪಟುಗಳು ಯೋಗ ಸರಪಳಿಯ ನಿರ್ಮಾಣ, ಸೂರ್ಯ ನಮಸ್ಕಾರ, ವಜ್ರಾಸನ, ತ್ರಿಕೋನಾಸನ, ಸಿದ್ಧಾಸನ, ಅರ್ಧಚಕ್ರಾಸನ ಸೇರಿದಂತೆ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್.ಸಮೂಹದ ಮುಖ್ಯಸ್ಥ ಶ್ರೀಹರಿ, ಯೋಗ ದಸರಾ ಉಪಸಮಿತಿಯ ವಿಶೇಷಾಧಿಕಾರಿ ಕೆ.ರಮ್ಯ, ಕಾರ್ಯಾಧ್ಯಕ್ಷ ಅನಂತರಾಜು, ಕಾರ್ಯದರ್ಶಿ ಪುಷ್ಪ ಸೇರಿದಂತೆ ಇನ್ನಿತರ ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ಮೈಸೂರು ದಸರಾ: ಶ್ರೇಯಾ ಘೋಷಾಲ್​ ಹಾಡಿಗೆ ಯುವಪಡೆ ಫಿದಾ, ಬಾನಂಗಳದಲ್ಲಿ ಡ್ರೋನ್ ಚಿತ್ತಾರ - Yuva Dasara Drone Show

ETV Bharat Logo

Copyright © 2024 Ushodaya Enterprises Pvt. Ltd., All Rights Reserved.