ಚಿಕ್ಕಬಳ್ಳಾಪುರ: ಜಿಲ್ಲೆಯ ಮಾಚಹಳ್ಳಿ ಕೆರೆ ಬಳಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವ ಪತ್ರಕರ್ತ ಜಿ. ಎಸ್. ಭರತ್ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುಡಿಬಂಡೆಯಿಂದ ಬಾಗೇಪಲ್ಲಿ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮಾಚಹಳ್ಳಿ ಕೆರೆ ಕಟ್ಟೆಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಘಟನೆ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದರೂ ಕೂಡ ಚಾಲಕನ ಜೀವ ಉಳಿದಿಲ್ಲ.
![JOURNALIST DIED IN ACCIDENT](https://etvbharatimages.akamaized.net/etvbharat/prod-images/13-01-2025/kn-ckb-01-accident-av-ka10046_13012025093659_1301f_1736741219_469.jpg)
ಬೆಂಗಳೂರಿನಲ್ಲಿ ವಾಸವಿದ್ದ ಗುಡಿಬಂಡೆ ಪಟ್ಟಣ ಮೂಲದ ಭರತ್, ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ವರದಿಗಾರರಾಗಿದ್ದರು. ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ಹಲವು ವರದಿಗಳ ಮೂಲಕ ಕ್ರಿಯಾಶೀಲ ಪತ್ರಕರ್ತ ಎಂದು ಹೆಸರು ಮಾಡಿದ್ದರು. ಕಳೆದ ದಿನವಷ್ಟೇ ಅನ್ನಭಾಗ್ಯ ಯೋಜನೆ ಬಗ್ಗೆ ಪತ್ರಿಕೆಯಲ್ಲಿ ವಿಶೇಷ ವರದಿ ಮಾಡಿ ಗಮನ ಸೆಳೆದಿದ್ದರು.
ಇದನ್ನೂ ಓದಿ: ಚಪ್ಪಲಿಯಿಂದ ಹೊಡೆದ ಮಹಿಳೆಯ ಪತಿಯ ಕೊಲೆಗೆ ಸ್ಕೆಚ್: ಮದ್ಯದ ನಶೆಯಲ್ಲಿ ಮತ್ತೊಬ್ಬನಿಗೆ ಇರಿದು ಜೈಲುಪಾಲು
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿ ಬಂಧನ