ಹುಬ್ಬಳ್ಳಿ: ನಾನು ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ, ನಿರಾಕರಿಸಿದರೆ ನೇಹಾ ಹಿರೇಮಠಳಂತೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಯುವಕನನ್ನು ಇಲ್ಲಿನ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಬ್ಬಾಸ್ ಸಿಖಂದರ್ ಬಂಧಿತ ಆರೋಪಿ. ಈತ ಬಾಲಕಿ ಶಾಲೆಗೆ ಹೋಗುವಾಗ ಪರಿಚಯ ಮಾಡಿಕೊಂಡಿದ್ದ. ಶಾಲೆಯಿಂದ ಮನೆಗೆ ಬಿಡುವುದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ್ದಾಗ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಬಾಲಕಿ ಮನೆ ಬಳಿ ಬಂದು ಅಬ್ಬಾಸ್ ಗಲಾಟೆ ಮಾಡಿದ್ದಾನೆ. ಬಾಲಕಿಯನ್ನು ಎಳೆದಾಡಿ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಬಾಲಕಿಯ ಪೋಷಕರು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಬ್ಬಾಸ್ ವಿರುದ್ದ ಸೆಕ್ಷನ್ 363, 376, 511, IPC U/s 74,329(4),351(3) ಹಾಗೂ ಪೊಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿದ ಕಸಬಾ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿ ಆರೋಪ: ಶಾಲೆಗೆ ಹೋಗುವುದಕ್ಕೂ ಹೆದರುತ್ತಿರುವ ಬಾಲಕಿ