ಸುಳ್ಯ (ದಕ್ಷಿಣ ಕನ್ನಡ) : ಯುವಕನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲಾ ಜಗಳಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರ್ಕಾರಿ ಶಾಲಾ ಜಗಳಿಯಲ್ಲಿ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ರೀತಿಯಲ್ಲಿ ಮೃತದೇಹ ಕಂಡುಬಂದಿದೆ.
ಸುಮಾರು 25 ರಿಂದ 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಕಳೆದ ಭಾನುವಾರ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ಕೊಲೆ ನಡೆದಿತ್ತು. ಇದು ಕೂಡ ತಲೆಗೆ ಕಲ್ಲು ಎತ್ತಿ ಹಾಕಿ ಕೃತ್ಯ ಎಸಗಲಾಗಿತ್ತು. ಈ ಕೇಸ್ಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ : ವ್ಯಕ್ತಿ ಹತ್ಯೆಮಾಡಿ ಮೃತದೇಹ ತುಂಡು ತುಂಡಾಗಿ ಕತ್ತರಿಸಿದ್ದ ಹಂತಕ: 3 ಚೀಲಗಳಲ್ಲಿ ತುಂಬಿ ಮೋರಿಗೆ ಎಸೆದಿದ್ದ ಆರೋಪಿ ಬಂಧನ - murder case