ಬೆಂಗಳೂರು : ನಗರದ ರೈಲು ನಿಲ್ದಾಣಕ್ಕೆ ಬರುತ್ತಿದ್ದ ಪ್ರಯಾಣಿನೊಬ್ಬ ವಿಂಡ್ಸರ್ ಮ್ಯಾನರ್ ಅಂಡರ್ ಪಾಸ್ನಿಂದ ಜಿಗಿದು ಸಾವನ್ನಪ್ಪಿರುವ ಘಟನೆ ನಗರದ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ ನಡೆದಿದೆ.
ತಮಿಳುನಾಡಿನಿಂದ ನಗರಕ್ಕೆ ಬರುತ್ತಿದ್ದ ರೈಲು ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಸಮೀಪಿಸುತ್ತಿದ್ದಂತೆ ವ್ಯಕ್ತಿಯೊಬ್ಬರು ರೈಲಿನಿಂದ ಜಿಗಿದಿದ್ದಾರೆ. ಈ ವೇಳೆ ಅಂಡರ್ ಪಾಸ್ ಕೆಳಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯು ತಮಿಳುನಾಡಿನ ವೇಲೂರು ಮೂಲದ ಗೌರೀಶ್ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ರೈ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಗೌರೀಶ್ ರೈಲ್ವೇ ಬ್ರಿಡ್ಜ್ನಿಂದ ಬಿದ್ದ ರಭಸಕ್ಕೆ ಯುವತಿ ಓಡಿಸುತ್ತಿದ್ದ ಕಿಯಾ ಸೊನೆಟ್ ಕಾರಿನ ಗಾಜು ಪುಡಿಪುಡಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ರೈಲಿನಿಂದ ಜಿಗಿದು ಸಾವನ್ನಪ್ಪಿರುವ ಬಗ್ಗೆ ಗೊತ್ತಾಗಿದೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ತನಿಖೆ ನಡೆಸಬೇಕಿದೆ. ಅಲ್ಲದೇ ಮೃತರ ತಂದೆ ಅವರ ಜತೆ ಸಂಪರ್ಕದಲ್ಲಿದ್ದು, ಅವರು ಬಂದ ಬಳಿಕವೇ ಸತ್ಯ ಗೊತ್ತಾಗಲಿದೆ ಎಂದು ರೈಲ್ವೆ ಎಸ್ಪಿ ಸೌಮ್ಯಲತಾ ತಿಳಿಸಿದ್ದಾರೆ.
ಇದನ್ನೂ ಓದಿ : ರೈಲ್ವೆ ಹಳಿ ಮೇಲೆ ಬಿದ್ದು ಯುವಕ ಸಾವು, ಸಿಡಿಲಿಗೆ ಕುರಿಗಾಹಿ ಬಲಿ