ETV Bharat / state

ಚಿಕ್ಕಮಗಳೂರು: ಹುಟ್ಟುಹಬ್ಬದ ದಿನ ಎತ್ತಿನ ಗಾಡಿ ಮಗುಚಿ ಬಿದ್ದು ಯುವಕ ಸಾವು - Chikkamagaluru

ತರೀಕೆರೆ ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ದುರ್ಘಟನೆ ಆತನ ಹುಟ್ಟುಹಬ್ಬದ ದಿನವೇ ನಡೆದಿದೆ.

ಯುವಕ ಸಾವು
ಯುವಕ ಸಾವು
author img

By ETV Bharat Karnataka Team

Published : Feb 2, 2024, 6:42 AM IST

ಚಿಕ್ಕಮಗಳೂರು: ಸೌದೆ ತರಲು ಹೋಗಿದ್ದಾಗ ಎತ್ತಿನ ಗಾಡಿ ಮಗುಚಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗೋಪಿ (18) ಮೃತರು. ಇವರ ಹುಟ್ಟುಹಬ್ಬದ ದಿನವೇ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ತರೀಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಿಮ್ಮವು ಕೈಗಾರಿಕಾ ಪ್ರದೇಶದಲ್ಲಿ ಇತ್ತೀಚಿಗೆ ನಡೆದಿದೆ. 23 ವರ್ಷದ ಸುಜನ್ ರಾವ್ ಮೃತರು. ಇವರು ಪಶ್ಚಿಮ ಬಂಗಾಳದ ನಿವಾಸಿ.

ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ಕಾರ್ಖಾನೆಯ ಕಾರ್ಮಿಕರ ವಸತಿ ನಿಲಯದಲ್ಲಿ ವಿದ್ಯುತ್ ಕಂಬವನ್ನು ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜ್ವರದಿಂದ ಆಸ್ಪತ್ರೆಗೆ ದಾಖಲಾದ ಯುವಕ ಸಾವು: ದವಾಖಾನೆ ವಿರುದ್ದ ಮೃತನ ಪೋಷಕರ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.