ETV Bharat / state

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ - YOUNG MAN STABBED

ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಅಯೋಧ್ಯೆ ನಗರದ ವಾಟರ್​ಟ್ಯಾಂಕ್ ಬಳಿ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ
ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ (ETV Bharat)
author img

By ETV Bharat Karnataka Team

Published : Jan 1, 2025, 10:23 PM IST

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಅಯೋಧ್ಯೆ ನಗರದ ವಾಟರ್​ಟ್ಯಾಂಕ್ ಬಳಿ ನಡೆದಿದೆ. ಅಂಬೇಡ್ಕರ್ ಕಾಲೋನಿ ನಿವಾಸಿ ಮಾರುತಿ ಚಾಕು ಇರಿತಕ್ಕೊಳಗಾದ ಯುವಕ. ಬುಧವಾರ ಸಂಜೆ ವಾಟರ್​ಟ್ಯಾಂಕ್ ಬಳಿ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೊಲೆ ಯತ್ನದ ಪ್ರಕರಣವನ್ನು ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.

ಗುಂಪಿನಿಂದ ಮೂವರ ಮೇಲೆ ಹಲ್ಲೆ: ಮತ್ತೊಂದೆಡೆ, ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪೊಂದು ಮೂರು ಜನರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಡನಾಳದ ಕೆಎಲ್ಇ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಂತೋಷ (54), ಬಚ್ಚು (40), ಬಿಕ್ರಮ (34) ಎಂದು ಗುರುತಿಸಲಾಗಿದೆ.

ನೀರಿನ ವಿಚಾರಕ್ಕೆ ಹತ್ತಾರು ಜನರ ಗುಂಪು ಏಕಾಏಕಿ ದಾಳಿ ಮಾಡಿ ಮಾಡಿದೆ. ಈ ವೇಳೆ, ಕಟ್ಟಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಸಂತೋಷ, ಬಚ್ಚು ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ವಿಷಯ ತಿಳಿದು ಕಿಮ್ಸ್ ಆಸ್ಪತ್ರೆಗೆ ಕಸಬಾಪೇಟೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ದಾವಣಗೆರೆ: ಹೊಸ ವರ್ಷಾಚರಣೆ ಬೆನ್ನಲ್ಲೇ ಅಪಘಾತ; ಮನೆಗೆ ಆಧಾರವಾಗಿದ್ದ ಯುವಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.