ETV Bharat / state

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ‌ ಅಣ್ಣನ ಕೊಲೆಗೈದ ತಮ್ಮ - Murder Over Property Dispute

author img

By ETV Bharat Karnataka Team

Published : Aug 19, 2024, 6:55 PM IST

ಪಿತ್ರಾರ್ಜಿತ ಆಸ್ತಿಗಾಗಿ ತಮ್ಮ ತನ್ನ ಅಣ್ಣನನ್ನೇ ಕೊಲೆಗೈದ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.

SP Kushal Chowkse
ಘಟನಾ ಸ್ಥಳದಲ್ಲಿ ಪೊಲೀಸರ ಪರಿಶೀಲನೆ (ETV Bharat)

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವೆ ನಡೆದ ಸಂಘರ್ಷ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಡುವಳಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ನಂಜುಂಡಯ್ಯ(55) ಎಂಬವರು ಮೃತಪಟ್ಟಿದ್ದಾರೆ.

ಆಸ್ತಿಗಾಗಿ ಅಣ್ಣ ನಂಜುಂಡಯ್ಯ ಹಾಗೂ ತಮ್ಮ ರಾಮಾಂಜಿನಪ್ಪ‌ ನಡುವೆ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದು ತಮ್ಮ ರಾಮಾಂಜಿನಪ್ಪ‌ ಹಾಗೂ ಮಕ್ಕಳು ಅಣ್ಣ ನಂಜುಂಡಯ್ಯನವರ ಮೇಲೆ ಕೋಲು, ದೊಣ್ಣೆಗಳಿಂದ ಹೊಡೆದು ಗಾಯಗೊಳಿಸಿದ್ದಾರೆ.

ತೀವ್ರ ಗಾಯಗೊಂಡ ನಂಜುಂಡಯ್ಯ ಅವರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಂಜುಂಡಯ್ಯ ಮೃತಪಟ್ಟಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಎಸ್​ಪಿ ಕುಶಾಲ್ ಚೌಕ್ಸೆ ಹಾಗೂ ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಗುಗ್ರಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ತುಮಕೂರು: ಆಸ್ತಿ ವಿವಾದ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಮಗ! - SON KILLS FATHER

ETV Bharat Logo

Copyright © 2024 Ushodaya Enterprises Pvt. Ltd., All Rights Reserved.