ETV Bharat / state

ಪ್ರಚಾರಕ್ಕೆ ಆಗಮಿಸಿದ್ದ ಪ್ರಧಾನಿಗೆ ಚೊಂಬು ಪ್ರದರ್ಶಿಸಲು ಯತ್ನ; ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪೊಲೀಸ್ ವಶಕ್ಕೆ - CONGRESS PROTEST - CONGRESS PROTEST

ಬೆಂಗಳೂರಿನ ಅರಮನೆ ಮೈದಾನಕ್ಕೆ ಪ್ರಧಾನಿಯವರು ತೆರಳುತ್ತಿದ್ದಾಗ ರಸ್ತೆಗೆ ಬಂದಿದ್ದ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ಚೊಂಬು ಪ್ರದರ್ಶಿಸಿದ್ದರು.

Nalapad in police custody
ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪೊಲೀಸ್ ವಶಕ್ಕೆ
author img

By ETV Bharat Karnataka Team

Published : Apr 20, 2024, 9:19 PM IST

Updated : Apr 21, 2024, 10:33 AM IST

ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪೊಲೀಸ್ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ಪ್ರದರ್ಶಿಸಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಹ್ಯಾರಿಸ್​ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ ಹೆಚ್​ಕ್ಯೂಟಿಸಿಯಿಂದ ಪ್ರಧಾನಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ಬಂದಿದ್ದ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್ ಚೊಂಬು ಪ್ರದರ್ಶಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಅವರನ್ನ ವಶಕ್ಕೆ ಪಡೆದಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ​ ಭಾಗಿಯಾಗಿದ್ದರು. ಭದ್ರತೆಗಾಗಿ ಬರೋಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂಓದಿ:ಅಪಾಯಕಾರಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್​​ ಅಧಿಕಾರಕ್ಕೆ ತರಬೇಡಿ: ಮೋದಿ - PM Modi campaign

Last Updated : Apr 21, 2024, 10:33 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.