ETV Bharat / state

ಬೆಳಗಾವಿ: ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ - Youth Dead Body Found - YOUTH DEAD BODY FOUND

ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿಯ ಯುವಕನೋರ್ವ ಶವವಾಗಿ ಪತ್ತೆಯಾಗಿದ್ದಾನೆ.

ನದಿಯಲ್ಲಿ ಕೊಚ್ಚಿ ಹೋದ ಯುವಕ
ನದಿಯಲ್ಲಿ ಕೊಚ್ಚಿ ಹೋದ ಯುವಕ (ETV Bharat)
author img

By ETV Bharat Karnataka Team

Published : Aug 4, 2024, 12:30 PM IST

Updated : Aug 4, 2024, 3:48 PM IST

ಯುವಕನ ಶವ ಪತ್ತೆ (ETV Bharat)

ಬೆಳಗಾವಿ: ನಗರದ ಹೊರವಲಯದಲ್ಲಿ ಹರಿಯುವ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಬೈಕ್ ಸವಾರನನ್ನು ಪತ್ತೆ ಮಾಡಲಾಗಿದೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಅಲತಗಾ ಗ್ರಾಮದ ಯುವಕ ಓಂಕಾರ ಪಾಟೀಲ (23) ಮೃತದೇಹ ಪತ್ತೆಯಾಗಿದೆ.

ಜ್ಯೋತಿನಾಥ ಪಾಟೀಲ ಜೊತೆಗೆ ಓಂಕಾರ ಬೈಕ್ ಮೇಲೆ ಕಂಗ್ರಾಳಿಗೆ ಹೋಗುತ್ತಿದ್ದರು‌. ಈ ವೇಳೆ ಸವಾರನ ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿ‌ ಪಕ್ಕದ ಕಾಲುವೆಗೆ ಬಿದ್ದಿದ್ದರು. ನದಿಯಲ್ಲಿ ಓಂಕಾರ ಕೊಚ್ಚಿಕೊಂಡು ಹೋಗಿದ್ದು, ಅದೃಷ್ಟವಶಾತ್ ಜ್ಯೋತಿನಾಥ್ ಪ್ರಾಣಾಪಾಯದಿಂದ ಪಾರಾಗಿದ್ದ.

ಸುದ್ದಿ ತಿಳಿಯುತ್ತಿದ್ದಂತೆ ಕಾಕತಿ ಠಾಣೆ ಪೊಲೀಸರ ಜೊತೆಗೆ ಡಿಸಿಪಿ ಪಿ.ವಿ.ಸ್ನೇಹಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಎಸ್​ಡಿಆರ್​ಎಫ್ ತಂಡ ಕೂಡ ಆಗಮಿಸಿ ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದರು. ಆದರೂ, ಯುವಕನ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಿ, ಯುವಕನ ಮೃತದೇಹ ಪತ್ತೆ ಮಾಡಲಾಗಿದೆ. ನದಿಯಿಂದ ಶವ ಹೊರ ತೆಗೆಯಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯ 46 ಗ್ರಾಮಗಳು ಜಲಾವೃತ: ಐವರು ಸಾವು, 10,304 ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ - 46 villages of Belagavi are flooded

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಯುವಕನಿಗಾಗಿ ಪೊಲೀಸ್, ಅಗ್ನಿಶಾಮಕ ಮತ್ತು ಎಸ್​ಡಿಆರ್​​ಎಫ್ ಸಿಬ್ಬಂದಿ ಮೂಲಕ ಕಾರ್ಯಾಚರಣೆ ನಡೆಸಿದ್ದರು. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೃಷ್ಣಾ, ಮಲಪ್ರಭಾ ನದಿ ಅಬ್ಬರ: ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿದ್ದ ವಿವಿಧ ಬೆಳೆಗಳು ಜಲಾವೃತ - Krishna River Flood

Last Updated : Aug 4, 2024, 3:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.