ETV Bharat / state

ಪೋಕ್ಸೋ ಪ್ರಕರಣದಲ್ಲಿ ಜಾಮೀನು‌ ಪಡೆದು ಹೊರಬಂದ ಯುವಕ ಅನುಮಾನಾಸ್ಪದ ಸಾವು - Youth Death Case - YOUTH DEATH CASE

ಪೋಕ್ಸೋ ಪ್ರಕರಣದಲ್ಲಿ ಜಾಮೀನು‌ ಪಡೆದು ಜೈಲಿನಿಂದ ಹೊರಬಂದಿದ್ದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.

youth death
ಸತ್ಯ (ETV Bharat)
author img

By ETV Bharat Karnataka Team

Published : May 10, 2024, 4:58 PM IST

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿ, ಕೆಲ ದಿನಗಳ ಹಿಂದೆ ಜಾಮೀನು ಪಡೆದು ಹೊರಬಂದಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಸತ್ಯ (20) ಸಾವನ್ನಪ್ಪಿದ ಯುವಕ. ಸಂಪಂಗಿರಾಮನಗರ ನಿವಾಸಿಯಾಗಿದ್ದು, ಫ್ಲಂಬರ್ ಕೆಲಸ ಮಾಡಿಕೊಂಡಿದ್ದ. ಅದೇ ಏರಿಯಾದಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆದರೆ, ಬಾಲಕಿಯು ಅಪ್ರಾಪ್ತೆ ಆಗಿರುವುದರಿಂದ ಆತನ ಮನೆಯವರು ಮಗಳ ತಲೆಕೆಡಿಸಿದ್ದಾನೆ ಎಂದು ದೂರು ನೀಡಿದ್ದರು.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು‌. ಕೆಲ ದಿನಗಳ ಬಳಿಕ ಜಾಮೀನು ಪಡೆದು ಹೊರಬಂದಿದ್ದ ಸತ್ಯ, ಮತ್ತೆ ಅಪ್ರಾಪ್ತೆಯನ್ನು ಸಂಪರ್ಕಿಸಲು‌ ಪ್ರಯತ್ನಿಸಿದ್ದ. ಇದು ಆಕೆಯ ಮನೆಯವರೆಗೆ ಗೊತ್ತಾಗಿ ಗಲಾಟೆಯಾಗಿದೆ ಎನ್ನಲಾಗಿದೆ. ನಿನ್ನೆವರೆಗೂ ಮನೆಯಲ್ಲಿದ್ದ ಸತ್ಯ ಶುಕ್ರವಾರ ಬೆಳಗ್ಗೆ ಕಟ್ಟಡದವೊಂದರ ಸಂದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಯುವಕನ ಪೋಷಕರು, ಸಹಜ ಸಾವಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್‌‌. ಟೆಕ್ಕಣ್ಣನವರ್ ಅವರು ತಿಳಿಸಿದ್ದಾರೆ‌.

ಇದನ್ನೂ ಓದಿ: ಬೆಂಗಳೂರು: ತೃತೀಯ ಲಿಂಗಿಯನ್ನು ಹತ್ಯೆ ಮಾಡಿದ್ದ ಮಹಿಳೆ ಬಂಧನ - Transgender Murder

ETV Bharat Logo

Copyright © 2025 Ushodaya Enterprises Pvt. Ltd., All Rights Reserved.