ETV Bharat / technology

ಹಣ್ಣು ಮಾಗಿಸಲು ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವಂತಿಲ್ಲ: ಎಫ್ಎಸ್ಎಸ್ಎಐ ಎಚ್ಚರಿಕೆ - FRUIT RIPENING - FRUIT RIPENING

ಹಣ್ಣುಗಳನ್ನು ಮಾಗಿಸಲು ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ರಾಸಾಯನಿಕವನ್ನು ಬಳಸದಂತೆ ಎಫ್ಎಸ್ಎಸ್ಎಐ ಎಚ್ಚರಿಕೆ ನೀಡಿದೆ.

ಹಣ್ಣು ಮಾಗಿಸಲು ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವಂತಿಲ್ಲ: ಎಫ್ಎಸ್ಎಸ್ಎಐ ಎಚ್ಚರಿಕೆ
ಹಣ್ಣು ಮಾಗಿಸಲು ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವಂತಿಲ್ಲ: ಎಫ್ಎಸ್ಎಸ್ಎಐ ಎಚ್ಚರಿಕೆ (ians)
author img

By ETV Bharat Karnataka Team

Published : May 19, 2024, 12:01 PM IST

ನವದೆಹಲಿ: ಹಣ್ಣುಗಳನ್ನು ಮಾಗಿಸಲು ನಿಷೇಧಿತ ಕ್ಯಾಲ್ಸಿಯಂ ಕಾರ್ಬೈಡ್ ರಾಸಾಯನಿಕ ಬಳಸದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಹಣ್ಣು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಾವಿನ ಋತುವಿನಲ್ಲಿ ಮಾವಿನ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಸಕೂಡದು ಎಂದು ಎಫ್ಎಸ್ಎಸ್ಎಐ ಸೂಚಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಹಾರ ಸುರಕ್ಷತಾ ಇಲಾಖೆಗಳು ಈ ವಿಷಯದಲ್ಲಿ ಜಾಗರೂಕತೆ ವಹಿಸುವಂತೆ ಮತ್ತು ಇಂಥ ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗಿರುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಎಫ್ಎಸ್ಎಸ್ಎಐ ಸಲಹೆ ನೀಡಿದೆ. ಹಣ್ಣು ಮಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ರಾಷ್ಟ್ರೀಯ ಆಹಾರ ನಿಯಂತ್ರಕ ಸಂಸ್ಥೆ ಅನುಮತಿ ನೀಡಿದೆ.

"ಬೆಳೆ, ವೈವಿಧ್ಯತೆ ಮತ್ತು ಪಕ್ವತೆಯನ್ನು ಅವಲಂಬಿಸಿ ಎಥಿಲೀನ್ ಅನಿಲವನ್ನು 100 ಪಿಪಿಎಂ ವರೆಗಿನ ಸಾಂದ್ರತೆಯಲ್ಲಿ ಬಳಸಬಹುದು. ಹಣ್ಣುಗಳಲ್ಲಿ ನೈಸರ್ಗಿಕವಾಗಿ ಕಂಡುಬರುವ ಹಾರ್ಮೋನ್ ಆಗಿರುವ ಎಥಿಲೀನ್, ರಾಸಾಯನಿಕ ಮತ್ತು ಜೀವರಾಸಾಯನಿಕ ಚಟುವಟಿಕೆಗಳ ಸರಣಿಯನ್ನು ಪ್ರಾರಂಭಿಸುವ ಮತ್ತು ನಿಯಂತ್ರಿಸುವ ಮೂಲಕ ಹಣ್ಣುಗಳ ಮಾಗುವ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ" ಎಂದು ಎಫ್ಎಸ್ಎಸ್ಎಐ ಹೇಳಿದೆ.

ಆದರೆ ಕ್ಯಾಲ್ಸಿಯಂ ಕಾರ್ಬೈಡ್ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ಇದು ಆರ್ಸೆನಿಕ್ ಮತ್ತು ರಂಜಕದ ಹಾನಿಕಾರಕ ಅಂಶಗಳನ್ನು ಹೊಂದಿರುತ್ತದೆ. ಈ ವಸ್ತುಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗುವಲ್ಲಿ ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣಿನಂಥ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

"ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯ ಸಮಯದಲ್ಲಿ ಹಣ್ಣುಗಳೊಂದಿಗೆ ನೇರ ಸಂಪರ್ಕಕ್ಕೆ ಬರುವ ಸಾಧ್ಯತೆಯಿದೆ ಮತ್ತು ಇದರಿಂದ ಹಣ್ಣುಗಳ ಮೇಲೆ ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಅಂಟಿಕೊಳ್ಳಬಹುದು" ಎಂದು ಎಫ್ಎಸ್ಎಸ್ಎಐ ತಿಳಿಸಿದೆ. ಈ ಅಪಾಯಗಳಿಂದಾಗಿ ಹಣ್ಣುಗಳನ್ನು ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಗಳು, 2011 ರ ಅಡಿಯಲ್ಲಿ ನಿಷೇಧಿಸಲಾಗಿದೆ.

"ಯಾವುದೇ ವ್ಯಕ್ತಿಯು ಸಾಮಾನ್ಯವಾಗಿ ಕಾರ್ಬೈಡ್ ಅನಿಲ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲವನ್ನು ಬಳಸಿ ಕೃತಕವಾಗಿ ಮಾಗಿಸಿದ ಹಣ್ಣುಗಳನ್ನು ಮಾರಾಟ ಮಾಡಬಾರದು" ಎಂದು ಈ ನಿಬಂಧನೆಯು ಸ್ಪಷ್ಟವಾಗಿ ಹೇಳುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್ ಅಥವಾ ಹಣ್ಣುಗಳನ್ನು ಕೃತಕವಾಗಿ ಮಾಗಿಸಲು ಅಂಥ ಯಾವುದೇ ವಸ್ತುಗಳನ್ನು ಬಳಸುವುದು ಕಂಡು ಬಂದರೆ ಗ್ರಾಹಕರು ಆ ಬಗ್ಗೆ ಸಂಬಂಧಪಟ್ಟ ರಾಜ್ಯ ಆಹಾರ ಸುರಕ್ಷತಾ ಆಯುಕ್ತರಿಗೆ ದೂರು ನೀಡಬಹುದು" ಎಂದು ಎಫ್ಎಸ್ಎಸ್ಎಐ ಹೇಳಿದೆ.

ಇದನ್ನೂ ಓದಿ : ಮೆದುಳಿನಲ್ಲಿ ಚಿಪ್ ಅಳವಡಿಸಿಕೊಳ್ಳಲು ಬಯಸುವಿರಾ? ಈಗಲೇ ನ್ಯೂರಾಲಿಂಕ್​ಗೆ ಅರ್ಜಿ ಹಾಕಿ! - Neuralink Chip Implant

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.