ETV Bharat / technology

ಇಸ್ರೋ ನೂತನ ಮುಖ್ಯಸ್ಥರಾಗಿ ವಿ.ನಾರಾಯಣನ್​ ಆಯ್ಕೆ: ಯಾರಿವರು ಗೊತ್ತಾ? - NEW CHAIRMAN OF ISRO

New Chairman Of ISRO: ಕೇಂದ್ರ ಸರ್ಕಾರ ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷರು ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

ISRO NEW CHAIRMAN OF V NARAYANAN  ISRO NEW CHAIRMAN APPOINTED  ISRO NEW CHAIRMAN DETAILS  WHO IS V NARAYANAN
ಇಸ್ರೋ ನೂತನ ಮುಖ್ಯಸ್ಥ ವಿ.ನಾರಾಯಣನ್​ (ANI)
author img

By ETV Bharat Tech Team

Published : Jan 8, 2025, 7:21 AM IST

New Chairman Of ISRO: ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ. ಹಾಲಿ ಮುಖ್ಯಸ್ಥ ಎಸ್.ಸೋಮನಾಥ್ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ ಜನವರಿ 14ರಂದು ನಿವೃತ್ತರಾಗಲಿದ್ದಾರೆ.

ವಿ.ನಾರಾಯಣನ್ ಕುರಿತು..: ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ (LPSC) ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವರು ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷ ಹುದ್ದೆಯಲ್ಲಿರುತ್ತಾರೆ.

ನಾರಾಯಣನ್ ಅವರು ಆದಿತ್ಯ ಬಾಹ್ಯಾಕಾಶ ನೌಕೆ ಮತ್ತು GSLV MK-III ಮಿಷನ್‌ನಂತಹ ಪ್ರಮುಖ ಯೋಜನೆಗಳಿಗೆ ಗಮನಾರ್ಹ ಕೊಡುಗೆ ನೀಡಿದವರು. ಇವರ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ 'ಶ್ರೀ ಪ್ರಶಸ್ತಿ' ಮತ್ತು IIT ಖರಗ್‌ಪುರದಿಂದ 'ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ' ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಮೊಳಕೆಯೊಡೆದ ಅಲಸಂದೆ ಬೀಜ! ಇಸ್ರೋ ಮಹತ್ವದ ಪ್ರಯೋಗ - COWPEA SEEDS GERMINATE IN SPACE

ವಿ.ನಾರಾಯಣನ್ ಶಿಕ್ಷಣ: ನಾರಾಯಣನ್ ಅವರು ಐಐಟಿ ಖರಗ್‌ಪುರದಿಂದ ಕ್ರಯೋಜೆನಿಕ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಮತ್ತು ಏರೋಸ್ಪೇಸ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಎಂ.ಟೆಕ್‌ನಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದರು. 1984ರಲ್ಲಿ ಇಸ್ರೋ ಸೇರಿದ ಇವರು ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್​ ವಿಭಾಗದಲ್ಲಿ ಪರಿಣತರು. 2018ರಲ್ಲಿ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್‌ನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು.

ಎಸ್.ಸೋಮನಾಥ್ ಅವರು ಜನವರಿ 2022ರಲ್ಲಿ ಇಸ್ರೋ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಇವರ ನೇತೃತ್ವದಲ್ಲಿ ಇಸ್ರೋ ಹಲವು ಐತಿಹಾಸಿಕ ಸಾಧನೆಗಳನ್ನು ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಇಳಿಸುವ ಮೂಲಕ ಭಾರತ, ಅಮೆರಿಕ ಮತ್ತು ಹಿಂದಿನ ಸೋವಿಯತ್ ಯೂನಿಯನ್ ಮತ್ತು ಚೀನಾದ ನಂತರ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ದೇಶಗಳ ವಿಶೇಷ ಕ್ಲಬ್‌ಗೆ ಸೇರಿದೆ.

ಇದನ್ನೂ ಓದಿ: ಸ್ಪಡೆಕ್ಸ್​ ಮಿಷನ್: ಇಂದು ನಡೆಯಬೇಕಾಗಿದ್ದ ಡಾಕಿಂಗ್​ ಪ್ರಕ್ರಿಯೆ ಮುಂದೂಡಿದ ಇಸ್ರೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.