ಹಿಡಕಲ್ ರಾಜಾ ಲಖಮಗೌಡ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ - Hidakal Dam - HIDAKAL DAM
🎬 Watch Now: Feature Video
Published : Jul 25, 2024, 2:26 PM IST
ಬೆಳಗಾವಿ: ಎರಡು ಜಿಲ್ಲೆಗಳ ಜೀವನಾಡಿಯಾಗಿರುವ ಘಟಪ್ರಭಾ ನದಿಯ ರಾಜಾ ಲಖಮಗೌಡ ಜಲಾಶಯ ಭರ್ತಿ ಹಂತ ತಲುಪಿದ್ದು ಬುಧವಾರ ಜಲಾಶಯದ 10 ಗೇಟ್ ಓಪನ್ ಮಾಡಿ ನೀರು ಬಿಡುಗಡೆ ಮಾಡಲಾಗಿದೆ. ನೀರು ಹಾಲ್ನೊರೆಯಂತೆ ಧುಮ್ಮಿಕ್ಕಿದ ದೃಶ್ಯ ಕಂಡುಬಂತು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಗ್ರಾಮದಲ್ಲಿರುವ ಜಲಾಶಯದಿಂದ ಹತ್ತು ಸಾವಿರ ಕ್ಯೂಸೆಕ್ ನೀರನ್ನು ನೀರಾವರಿ ನಿಗಮ ಅಧಿಕಾರಿಗಳು ಬಿಡುಗಡೆ ಮಾಡಿದರು.
51 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯವು ಸದ್ಯ ಶೇ. 85ರಷ್ಟು ಭರ್ತಿಯಾಗಿದೆ. 2,175 ಅಡಿ ಗರಿಷ್ಠ ಮಟ್ಟ ಇರುವ ಜಲಾಶಯದಲ್ಲಿ 2,165 ಅಡಿ ನೀರು ಸಂಗ್ರಹವಾಗಿದೆ. ಘಟಪ್ರಭಾ ನದಿಗೆ 31,153 ಕ್ಯೂಸೆಕ್ ಒಳ ಹರಿವಿದೆ.
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದೂ ಕೂಡ ಘಟಪ್ರಭಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುವ ಸಾಧ್ಯತೆಯಿದೆ. ಹಾಗಾಗಿ, ಹುಕ್ಕೇರಿ, ಗೋಕಾಕ, ಮೂಡಲಗಿ, ಮುಧೋಳದ ನದಿ ತೀರದಲ್ಲಿ ಪ್ರವಾಹ ಭೀತಿಯಿದೆ. ನದಿ ತೀರದ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: ಮಹಾರಾಷ್ಟ್ರ- ಗುಜರಾತ್ನಲ್ಲಿ ಮಳೆ ಅಬ್ಬರ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - Heavy Rain in Maharashtra