LIVE: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ - Lok Sabha Live

By ETV Bharat Karnataka Team

Published : Jun 27, 2024, 11:15 AM IST

Updated : Jun 27, 2024, 12:15 PM IST

thumbnail

18ನೇ ಲೋಕಸಭೆಯ ಮೊದಲ ಅಧಿವೇಶನದ 4ನೇ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಭಾಷಣ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಮೂರನೇ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ರಾಷ್ಟ್ರಪತಿಗಳ ಮೊದಲ ಭಾಷಣ ಇದಾಗಿದೆ. ಭಾಷಣದ ನಂತರ ಉಭಯ ಸದನಗಳಲ್ಲಿ ವಂದನಾ ನಿರ್ಣಯವನ್ನು ಮಂಡಿಸಲಾಗುತ್ತದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದೆ. ಗುರುವಾರದಿಂದ ರಾಜ್ಯಸಭಾ ಅಧಿವೇಶನ ಆರಂಭವಾಗಲಿದೆ. ಬುಧವಾರ ಧ್ವನಿ ಮತದ ಮೂಲಕ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸತತ ಎರಡನೇ ಬಾರಿಗೆ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರು ನೂತನ ಸ್ಪೀಕರ್​ ಓಂ ಬಿರ್ಲಾ ಅವರಿಗೆ ಅಭಿನಂದಿಸಿದ್ದರು. ಇದೇ ವೇಳೆ ರಾಹುಲ್​ - ಮೋದಿ ಹಸ್ತಲಾಘವ ಮಾಡಿದ್ದು ಗಮನ ಸೆಳೆದಿತ್ತು. ದೇಶದ ಜನತೆಯ ಧ್ವನಿ ಬಗ್ಗೆ ಮಾತನಾಡಲು ನೀವು ನಮಗೆ ಮುಕ್ತ ಅವಕಾಶ ನೀಡುತ್ತೀರಿ ಎಂದು ಭಾವಿಸುತ್ತೇನೆ ಎಂದು ರಾಹುಲ್​ ಗಾಂಧಿ ಹೇಳಿದ್ದರು. 

Last Updated : Jun 27, 2024, 12:15 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.