WATCH VIDEO: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕೆಳಹಂತದ 5 ಸೇತುವೆಗಳು ಮುಳುಗಡೆ - 5 bridges submerged - 5 BRIDGES SUBMERGED
🎬 Watch Now: Feature Video
Published : Jul 16, 2024, 5:22 PM IST
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಮತ್ತೆ ಕೆಳಹಂತದ 5 ಸೇತುವೆಗಳು ಜಲಾವೃತಗೊಂಡಿವೆ. ದೂಧಗಂಗಾ ನದಿಗೆ ಅಡ್ಡಲಾಗಿರುವ ಮೂರು ಸೇತುವೆ, ಕೃಷ್ಣಾ ನದಿಯ ಎರಡು ಸೇತುವೆ ಮುಳುಗಡೆಯಾಗಿದೆ.
ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದ ಕುನ್ನೂರ-ಬಾರವಾಡ, ಕಾರದಗಾ-ಬೋಜ್, ಕುನ್ನೂರ-ಬೋಜವಾಡಿ ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯದತ್ತವಾಡ-ಮಲ್ಲಿಕವಾಡ, ಬಾವನಸೌದತ್ತಿ- ಮಾಂಜರಿ ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
ಮಹಾರಾಷ್ಟ್ರ ಜಲಾಶಯಗಳಿಂದ ಅಧಿಕೃತವಾಗಿ ನದಿಗಳಿಗೆ ಇದುವರೆಗೂ ನೀರು ಹರಿಸಿದೆ ಇದ್ದರು ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಬಿದ್ದ ಪರಿಣಾಮವಾಗಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೃಷ್ಣಾ ನದಿಯಲ್ಲಿ 65 ಸಾವಿರ ಕ್ಯೂಸೆಕ್ ಒಳಹರಿವು ಇರುವುದರಿಂದ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದೆ. ಮುಳುಗಿದ ಸೇತುವೆ ಎರಡು ಬದಿಯಲ್ಲಿ ಬೆಳಗಾವಿ ಜಿಲ್ಲಾಡಳಿತ ಬ್ಯಾರಿಕೆಡ್ ಹಾಕಿ ಸಂಚಾರ ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ - ಮಹಾರಾಷ್ಟ್ರ ಗಡಿಯ ನರಸಿಂಹವಾಡಿ ದತ್ತ ಮಂದಿರಕ್ಕೆ ಜಲ ದಿಗ್ಬಂಧನ - Narsimhawadi Datta Mandir