ವಿಜಯಪುರ: ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ತೆಂಗಿನಮರ - Coconut Tree Caught Fire - COCONUT TREE CAUGHT FIRE

🎬 Watch Now: Feature Video

thumbnail

By ETV Bharat Karnataka Team

Published : May 17, 2024, 1:51 PM IST

ವಿಜಯಪುರ: ಶಾರ್ಟ್ ಸರ್ಕ್ಯೂಟ್‌‌ನಿಂದ ತೆಂಗಿನಮರದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ನಾಲಬಂದ್ ಗಲ್ಲಿಯಲ್ಲಿ ನಡೆದಿದೆ. ವಿದ್ಯುತ್ ಕಂಬದ ಮೇಲೆ ಬಿದ್ದ ತೆಂಗಿನ ಗರಿಯಿಂದಾಗಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 

ಮಳೆಯಿಂದಾಗಿ ಗರಿ ಬಿದ್ದ ಜಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ ಉಂಟಾಗಿದ್ದು, ನೋಡುನೋಡುತ್ತಿದ್ದಂತೆ ಇಡೀ ತೆಂಗಿನಮರಕ್ಕೆ ಬೆಂಕಿ ಆವರಿಸಿಕೊಂಡಿತು. ಮರ ಸುಟ್ಟು ಹೋಗಿದೆ. ಘಟನೆ ನಡೆದ ಸ್ಥಳ ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದೆ.

ಇದನ್ನೂ ಓದಿ:ಹೈದರಾಬಾದ್​ v/s ಗುಜರಾತ್ ಪಂದ್ಯಕ್ಕೆ ಮಳೆ ಅಡ್ಡಿ: ಮ್ಯಾಚ್​ ರದ್ದಾದರೆ ಏನಾಗುತ್ತೆ? - SRH vs GT match

ರಾಜ್ಯದಲ್ಲಿ ಕಳೆದ 12 ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ 3 ದಿನ ಮುಂದುವರೆಯಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರದಿಂದ ಭಾನುವಾರದವರೆಗೆ ವರ್ಷಧಾರೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಮೇ 17ರಿಂದ ಕರಾವಳಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರುಪೂರ್ವ ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗುತ್ತಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆ ಮಳೆಯಾಗಲಿದೆ.

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.