ವಿಜಯಪುರ: ರಸ್ತೆಗೆ ಉರುಳಿ ಬಿದ್ದ ಸ್ಪಿರಿಟ್ ತುಂಬಿದ್ದ ವಾಹನ ಬೆಂಕಿಗಾಹುತಿ- ವಿಡಿಯೋ - Tanker catches fire - TANKER CATCHES FIRE
🎬 Watch Now: Feature Video
Published : Mar 25, 2024, 10:51 AM IST
ವಿಜಯಪುರ: ಸ್ಪಿರಿಟ್ ತುಂಬಿದ್ದ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿಬಿದ್ದ ಘಟನೆ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈಪಾಸ್ ರಸ್ತೆಯಲ್ಲಿ ಇಂದು ನಡೆಯಿತು. ಟ್ಯಾಂಕರ್ ರಸ್ತೆಗೆ ಉರುಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಇಡೀ ವಾಹನಕ್ಕೆ ವ್ಯಾಪಿಸಿತು. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದಾಗಿ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈಪಾಸ್ ಬಳಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಮೊಬೈಲ್ನಲ್ಲಿ ಸೆರೆಯಾದ ಈ ದೃಶ್ಯದಲ್ಲಿ ವಾಹನ ರಸ್ತೆಗೆ ಅಡ್ಡಲಾಗಿ ಬಿದ್ದು ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಅವಘಡ: 13 ಅರ್ಚಕರಿಗೆ ಗಾಯ - Fire at Mahakal Temple Ujjain