LIVE: ನಟ ದ್ವಾರಕೀಶ್ ಅಂತಿಮ ದರ್ಶನದ ನೇರಪ್ರಸಾರ - Dwarakish - DWARAKISH
🎬 Watch Now: Feature Video
Published : Apr 17, 2024, 9:10 AM IST
|Updated : Apr 17, 2024, 11:41 AM IST
ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಮೇರುನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಅಂತಿಮ ದರ್ಶನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದೆ. ಸ್ಯಾಂಡಲ್ವುಡ್ನ ನಟ, ನಟಿಯರು, ಸಾರ್ವಜನಿಕರು ಹಾಗೂ ಅಭಿಮಾನಿಗಳು ಆಗಮಿಸಿ ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಇದರ ನೇರಪ್ರಸಾರ ವೀಕ್ಷಿಸಿ.ಬೆಂಗಳೂರಿನ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8.30ರಿಂದಲೇ ಆರಂಭವಾಗಿದ್ದು, 11:30 ರವರೆಗೆ ಇರಲಿದೆ. ಬಳಿಕ ಬೆಂಗಳೂರಿನ ಚಾಮರಾಜಪೇಟೆಯ ಟಿಆರ್ ಮಿಲ್ ಬಳಿ ಅಂತ್ಯಕ್ರಿಯೆ ನೆರವೇರಲಿದೆ. ಕರ್ನಾಟಕದ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್ ಮಂಗಳವಾರ ನಿಧನ ಹೊಂದಿದ್ದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಬಾಲಕೃಷ್ಣ, ಅಶ್ವಥ್, ಸೇರಿದಂತೆ ಕನ್ನಡ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್ಗಳ ಜೊತೆ ಅಭಿನಯಿಸಿದ ಕೀರ್ತಿ ದ್ವಾರಕೀಶ್ ಅವರದ್ದಾಗಿದೆ. 1964 ರಲ್ಲಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. 40ಕ್ಕೂ ಹೆಚ್ಚು ಸಿನಿಮಾಗ ನಿರ್ಮಾಣ ಹಾಗೂ 15 ಕ್ಕೂ ಹೆಚ್ಚು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.
Last Updated : Apr 17, 2024, 11:41 AM IST