ಕಾವೇರಿ ನದಿಯಲ್ಲಿ ತಾಯಿಯ ಅಸ್ಥಿ ವಿಸರ್ಜಿಸಿದ ನಟ ಸುದೀಪ್ - ASTHI VISARJAN
🎬 Watch Now: Feature Video
Published : Oct 22, 2024, 6:57 PM IST
ಮಂಡ್ಯ: ನಟ ಸುದೀಪ್ ಅವರು ಇಂದು ಶ್ರೀರಂಗಪಟ್ಟಣದ ಗೋಸಾಯಿಘಾಟ್ ಬಳಿಯ ಕಾವೇರಿ ನದಿಯಲ್ಲಿ ತಮ್ಮ ತಾಯಿ ಸರೋಜಮ್ಮ ಅವರ ಅಸ್ಥಿ ವಿಸರ್ಜನೆ ಮಾಡಿ, ಸದ್ಗತಿಗಾಗಿ ಪ್ರಾರ್ಥಿಸಿದರು.
ವಿಧಿವಿಧಾನ ಕಾರ್ಯದಲ್ಲಿ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು. ಬೆಳಗ್ಗೆ 9 ಗಂಟೆಗೆ ಆಗಮಿಸಿದ ಸುದೀಪ್, ನದಿಯಲ್ಲಿ ಸ್ನಾನ ಮಾಡಿ ಬಳಿಕ ವಿಧಿವಿಧಾನ ನೆರವೇರಿಸಿದರು. ಇದಾದ ಬಳಿಕ ಬೆಂಗಳೂರಿನತ್ತ ತೆರಳಿದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಭಾನುವಾರ ಕೊನೆಯುಸಿರೆಳೆದಿದ್ದರು.
ಶನಿವಾರ ತಡರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದರು.
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಗಣ್ಯರು, ನಟರಾದ ಶಿವ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಪುತ್ರ ವಿನಯ್ ರಾಜಕುಮಾರ್, ನಟಿ ತಾರಾ ಅನುರಾಧ, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ, ನಿರ್ಮಾಪಕ ಸಾರಾ ಗೋವಿಂದು, ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಅಂತಿಮ ದರ್ಶನ ಪಡೆದು, ಸಂತಾಪ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ಚಿತ್ರರಂಗದ ತಾರೆಯರು, ರಾಜಕೀಯ ಗಣ್ಯರು