LIVE: ದಾವಣಗೆರೆಯಲ್ಲಿ ಪ್ರಿಯಾಂಕಾ ಗಾಂಧಿ ಮತಬೇಟೆ - ಸಿದ್ದರಾಮಯ್ಯ, ಡಿಕೆಶಿ ಭಾಗಿ - Priyanka Gandhi Vadra - PRIYANKA GANDHI VADRA
🎬 Watch Now: Feature Video
Published : May 4, 2024, 4:59 PM IST
|Updated : May 4, 2024, 6:01 PM IST
ದಾವಣಗೆರೆ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತಕ್ಕೆ ಮತಬೇಟೆ ಬಿರುಸಿನಿಂದ ಸಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಕೈ ಅಭ್ಯರ್ಥಿ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಪರ ಮತಯಾಚನೆ ಮಾಡುತ್ತಿದ್ದಾರೆ.ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಬಹಿರಂಗ ಸಭೆ ನಡೆಯುತ್ತಿದೆ. ಪ್ರಿಯಾಂಕಾ ವಾದ್ರಾ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲೆಯ ಶಾಸಕರುಗಳಾದ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ, ಡಿ.ಜಿ. ಶಾಂತನಗೌಡ, ಶಿವಗಂಗಾ ಬಸವರಾಜ್, ಕೆ.ಎಸ್. ಬಸವಂತಪ್ಪ, ದೇವೆಂದ್ರಪ್ಪ, ಶಾಸಕಿ ಲತಾ ಮಲ್ಲಿಕಾರ್ಜುನ್, ಮಾಜಿ ಸಚಿವ ಕೆ.ಸಿ. ಕೊಂಡಯ್ಯ, ನಂದಿಗಾವಿ ಶ್ರೀನಿವಾಸ್, ಅರಸೀಕೆರೆ ಕೊಟ್ರೇಶ್, ಎಸ್. ರಾಮಪ್ಪ, ಪಿ.ಟಿ. ಪರಮೇಶ್ವರ ನಾಯ್ಕ ಸಮಾವೇಶದಲ್ಲಿ ಇದ್ದಾರೆ.ಸಮಾವೇಶಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕ್ರಮ ಕೈಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರು ಕಣಕ್ಕಿಳಿದಿದ್ದಾರೆ.
Last Updated : May 4, 2024, 6:01 PM IST