LIVE: ಚಳಿಗಾಲದ ಅಧಿವೇಶನ, ವಿಧಾನಸಭೆ ಕಲಾಪದ ನೇರಪ್ರಸಾರ

🎬 Watch Now: Feature Video

thumbnail

By ETV Bharat Karnataka Team

Published : 2 hours ago

Updated : 1 hours ago

ಬೆಳಗಾವಿ: ಚಳಿಗಾಲದ ಅಧಿವೇಶನದ ಮೂರನೇ ದಿನದ ಕಲಾಪ ನಡೆಯುತ್ತಿದೆ. ಸದನದಲ್ಲಿ ಮೊದಲ ದಿನವೇ ವಕ್ಫ್ ಆಸ್ತಿ ವಿಚಾರ ಪ್ರತಿಧ್ವನಿಸಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಪ್ರಶ್ನೋತ್ತರ ನಂತರ ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿ ಎಲ್ಲ ಗದ್ದಲಗಳಿಗೆ ತೆರೆ ಎಳೆದು ಮುಂದಿನ ಕಲಾಪವನ್ನು ಕೈಗೆತ್ತಿಕೊಂಡಿದ್ದರು. ತದನಂತರ, ಪಂಚಮಸಾಲಿ ಮೀಸಲಾತಿ ಒತ್ತಾಯವೂ ಕೂಡ ಸದನದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಯಿತು. ಆ ಬಳಿಕ ಮಂಗಳವಾರ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು  ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬಾರದ್ದನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂರು ಬಾರಿ ಲಾಠಿ ಬೀಸಿದ್ದರು. ಕೆಲವರ ಮೈ-ಕಾಲುಗಳಿಗೆ ಗಾಯಗಳಾದವು. ಪ್ರತಿಭಟನಾನಿರತರಲ್ಲಿ ಕೆಲವರು ಪೊಲೀಸ್‌ ವಾಹನಕ್ಕೆ ಕಲ್ಲು ತೂರಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ವಾಮೀಜಿ, ಯತ್ನಾಳ್ ಸೇರಿ ಹಲವರು ಹೆದ್ದಾರಿಯಲ್ಲೇ ಧರಣಿ ಕುಳಿತರು. ಇಂದೂ ಕೂಡ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದೆ. ಲಾಠಿ ಚಾರ್ಜ್​ ಖಂಡಿಸಿ ಬಿಜೆಪಿ ಶಾಸಕರು ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ವಿಧಾನಸಭೆ ಕಲಾಪದ ನೇರಪ್ರಸಾರ ವೀಕ್ಷಿಸಿ.
Last Updated : 1 hours ago

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.