ವಿಜಯಪುರ : ಬಿಜೆಪಿ ಜಿಲ್ಲಾ ಯುವಮೋರ್ಚಾ ಘಟಕದಿಂದ ಪ್ರತಿಭಟನೆ - ಸಂಸದ ಡಿ ಕೆ ಸುರೇಶ್‌

🎬 Watch Now: Feature Video

thumbnail

By ETV Bharat Karnataka Team

Published : Feb 4, 2024, 7:36 PM IST

ವಿಜಯಪುರ : ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದ ಸಂಸದ ಡಿ ಕೆ ಸುರೇಶ್‌ ಭಾರತ ವಿಭಜನೆ ಕುರಿತ ಹೇಳಿಕೆ ಖಂಡಿಸಿ ಮತ್ತು ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಭೋದಿಸಿರುವುದನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಘಟಕದಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್‌ ಮೂಲಕ ವಿಜಯಪುರ ನಗರಕ್ಕೆ ಬಂದಿಳಿದಿದ್ದರು. ಇದೇ ವೇಳೆ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಹೂಗಾರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮುಂಭಾಗ ಹಾಗೂ ಕೋರ್ಟ್‌ ಸರ್ಕಲ್‌ ಬಳಿ ರಸ್ತೆ ಬಂದ್‌ ಮಾಡಿ ಸುತ್ತಮುತ್ತಲಿನ ಪರಿಸರದಲ್ಲಿ ಡಿವೈಎಸ್​ಪಿ ನೇತೃತ್ವದಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಸಹ ಕೈಗೊಳ್ಳಲಾಗಿತ್ತು. ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಸಂಸದ ಡಿ ಕೆ ಸುರೇಶ್‌ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಈ ವೇಳೆ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಹಾಕಲಾಗಿದ್ದ ಪೊಲೀಸ್‌ ಬ್ಯಾರಿಕೇಡ್‌ ತಳ್ಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್‌ ತಳ್ಳುವಾಗ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ನೂಕಾಟ ತಳ್ಳಾಟ ಉಂಟಾಗಿ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಹೈಡ್ರಾಮಾ ನಡೆಯಿತು. ಈ ಸಂದರ್ಭ ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ಪೊಲೀಸರು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್‌ ವಾಹನದಲ್ಲಿ ಕರೆದೊಯ್ದರು. 

ಇದನ್ನೂ ಓದಿ: ಸಂಸದ ಡಿ. ಕೆ ಸುರೇಶ್ ನಿವಾಸ ಮುತ್ತಿಗೆಗೆ ಯತ್ನ: ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.