ಲೋಕಸಭೆಯಲ್ಲಿ ಬಜೆಟ್ - 2024 ಮೇಲೆ ಚರ್ಚೆ: LIVE
🎬 Watch Now: Feature Video
Published : Feb 6, 2024, 12:17 PM IST
|Updated : Feb 6, 2024, 7:48 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1 ರಂದು ಮಂಡಿಸಿದ ಮಧ್ಯಂತರ ಬಜೆಟ್ ಮೇಲೆ ಲೋಕಸಭೆಯಲ್ಲಿ ಇಂದು ಚರ್ಚೆ ನಡೆಯಲಿದೆ. ಜ.31 ರಿಂದ ಆರಂಭವಾಗಿರುವ ಅಧಿವೇಶನ ಫೆ.9ರವರೆಗೆ ನಡೆಯಲಿದೆ. ಇಂದು ಐದನೇ ದಿನದ ಕಲಾಪ ನಡೆಯುತ್ತಿದೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಮೇಲಿನ ಚರ್ಚೆ ಆರಂಭವಾಗಲಿದೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದು, ಬಿಜೆಪಿ ಕನಿಷ್ಠ 370 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮೋದಿ ಅಧಿವೇಶನದಲ್ಲಿ ತಿಳಿಸಿದ್ದರು.
ಸರ್ಕಾರದ ಮೂರನೇ ಅವಧಿ ಆರಂಭವಾಗುವುದು ಬಹಳ ದೂರವಿಲ್ಲ. ಇನ್ನು ಹೆಚ್ಚೆಂದರೆ 100 ರಿಂದ 125 ದಿನಗಳು ಉಳಿದಿವೆ ಎಂದು ಅವರು ಮುಂಬರುವ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿದರು. ಎನ್ಡಿಎಯ ಮೂರನೇ ಅವಧಿಯಲ್ಲಿ ಇನ್ನೂ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಮತ್ತು ಈ ನಿರ್ಧಾರಗಳು ದೇಶದ ಮುಂದಿನ 1,000 ವರ್ಷಗಳ ಭವಿಷ್ಯಕ್ಕೆ ಅಡಿಪಾಯ ಹಾಕಲಿವೆ ಎಂದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 370, ಎನ್‌ಡಿಎಗೆ 400ಕ್ಕೂ ಹೆಚ್ಚು ಸೀಟು: ಪ್ರಧಾನಿ ಮೋದಿ