ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ : ನೇರ ಪ್ರಸಾರ
🎬 Watch Now: Feature Video
ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿದ್ದು, ಇಂದು ಆರನೇ ದಿನದ ಕಲಾಪ ನಡೆಯುತ್ತಿದೆ. ಇನ್ನು ಅಧಿವೇಶನ ಫೆ.9ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಒಂದು ದಿನ ಅಂದರೆ ಶನಿವಾರದವರೆಗೆ ವಿಸ್ತರಿಸಲಾಗಿದೆ. ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲೆ ಮಾತನಾಡುತ್ತಿದ್ದಾರೆ.
ಜನವರಿ 31ರಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಇದೀಗ 2014ಕ್ಕಿಂತ ಮುಂಚಿನ 10 ವರ್ಷಗಳ ಮತ್ತು ನಂತರದ 10 ವರ್ಷಗಳ ಶ್ವೇತಪತ್ರವನ್ನು ಹೊರಡಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಮಂಗಳವಾದ ಲೋಕಸಭೆ ಅಧಿವೇಶನದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಮೇಲೆ ಚರ್ಚೆ ನಡೆಯಿತು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂಥ ಅಕ್ರಮಗಳನ್ನು ತಡೆಯಲು ಸಾರ್ವಜನಿಕ ಪರೀಕ್ಷೆ (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಅಂಗೀಕರಿಸಲಾಯಿತು. ಕೇಂದ್ರ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸೋಮವಾರ ಸಾರ್ವಜನಿಕ ಪರೀಕ್ಷೆ (ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ)-2024 ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದರು. ಬಳಿಕ ವಿಧೇಯಕದ ಮೇಲೆ ಚರ್ಚೆ ನಡೆಯಿತು. ಪ್ರತಿಪಕ್ಷಗಳ ಸದಸ್ಯರು ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಪ್ರಸ್ತಾಪಿಸಿದರು. ಆದರೆ, ಇವುಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಮಸೂದೆಗೆ ಸದನ ಅನುಮೋದನೆ ನೀಡಿತು.