LIVE: ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯ - ಹೆಚ್.ಕೆ.ಪಾಟೀಲ್ ಜಂಟಿ ಮಾಧ್ಯಮಗೋಷ್ಟಿ - HK PATIL PRESS MEET

🎬 Watch Now: Feature Video

thumbnail

By ETV Bharat Karnataka Team

Published : Oct 28, 2024, 3:10 PM IST

Updated : Oct 28, 2024, 3:57 PM IST

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಿತು. ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಹಾಗೂ ಜಾತಿ ಗಣತಿ ವರದಿ ಬಿಡುಗಡೆ ಸೇರಿದಂತೆ ಸಭೆಯಲ್ಲಿ ಹಲವು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸದ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಸಚಿವರಾದ ಪ್ರಿಯಾಂಕ್​ ಖರ್ಗೆ, ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಆರ್​ ಬಿ ತಿಮ್ಮಾಪುರ, ಶಿವರಾಜ್ ತಂಗಡಗಿ ಅವರೊಂದಿಗೆ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡುತ್ತಿದ್ದಾರೆ.  ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ-2015ನ್ನು ಫೆ. 9ರಂದು ಆಯೋಗದ ಅಂದಿನ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರಿಂದ ಸ್ವೀಕರಿಸಿದ್ದ ಸರ್ಕಾರ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಪ್ರಕಟಿಸಿತ್ತು. ಇದಕ್ಕೆ ಸಾಕಷ್ಟು ವಿರೋಧಗಳು ಕೇಳಿ ಬಂದಿದ್ದವು. ಆಯೋಗದ ವರದಿಯಲ್ಲಿನ ಅಂಶಗಳು ಸೋರಿಕೆ, ಅವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲಾಗಿದೆ ಎಂಬಿತ್ಯಾದಿ ಆರೋಪಗಳೂ ಕೇಳಿ ಬಂದಿದ್ದರಿಂದ ಹಾಗೂ ಆಡಳಿತಾರೂಢ ಕಾಂಗ್ರೆಸ್‌ ಹಿರಿಯ ಮುಖಂಡರೂ ಆದ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವರು ಜಾತಿ ಗಣತಿ ವರದಿಗೆ ವಿರೋಧಿಸಿದ್ದರಿಂದ ಚರ್ಚೆಗೆ ಗ್ರಾಸವಾಗಿದೆ. 
Last Updated : Oct 28, 2024, 3:57 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.