ತುಮಕೂರು: ರಸ್ತೆಯಲ್ಲೇ ಬೆಂಕಿ ಹೊತ್ತಿ ಉರಿದ ಕಾರು - car caught fire - CAR CAUGHT FIRE
🎬 Watch Now: Feature Video
Published : Apr 13, 2024, 10:45 AM IST
ತುಮಕೂರು : ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತಿನಲ್ಲೇ ಸುಟ್ಟು ಕರಕಲಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ನಡು ರಸ್ತೆಯಲ್ಲೇ ಶುಕ್ರವಾರ ಮಧ್ಯಾಹ್ನ ಘಟನೆ ಜರುಗಿದೆ.
ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿ ಕೂಡಲೇ ಪ್ರಯಾಣಿಕರು ಕಾರಿನಿಂದ ಹೊರಗಡೆ ಬಂದಿದ್ದಾರೆ. ಬಳಿಕ ಕಾರು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಅಷ್ಟರೊಳಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇವುಗಳನ್ನೂ ಓದಿ : ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಅಚ್ಚರಿ ರೀತಿ ಇಬ್ಬರು ಪ್ರಯಾಣಿಕರು ಪಾರು - Car Caught Fire
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ, ಅಚ್ಚರಿ ರೀತಿ ಇಬ್ಬರು ಪ್ರಯಾಣಿಕರು ಪಾರು - Car Caught Fire