15 ಅಡಿ ಎತ್ತರದ ಸ್ಮಶಾನದ ಗೋಡೆ ದಿಢೀರ್ ಕುಸಿದು ನಾಲ್ವರು ಸಾವು: ಭಯಾನಕ ವಿಡಿಯೋ - Cemetery Wall Collapsed - CEMETERY WALL COLLAPSED

🎬 Watch Now: Feature Video

thumbnail

By ETV Bharat Karnataka Team

Published : Apr 21, 2024, 1:21 PM IST

ಹರಿಯಾಣ: ಅಂದಾಜು 15 ಅಡಿ ಎತ್ತರದ ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಹರಿಯಾಣದ ಗುರುಗ್ರಾಮ್​ನಲ್ಲಿ ನಡೆಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗೋಡೆಯ ಒಂದು ಭಾಗದಲ್ಲಿ ಸಾವಿರಾರು ಟನ್​ ಭಾರದ ಮರದ ದಿಮ್ಮಿಗಳನ್ನು ಇಡಲಾಗಿತ್ತು. ಗೋಡೆಯ ಮತ್ತೊಂದು ಭಾಗದ ಮುಂಭಾಗ ಜನ ಕುಳಿತಿದ್ದರು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಗೋಡೆ ಕುಸಿದಿದೆ. ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ನಡೆದ ತಕ್ಷಣ ಸ್ಥಳದಲ್ಲೇ ನೆರೆದಿದ್ದ ಇತರರು ಗೋಡೆಯ ಕೆಳಗೆ ಸಿಲುಕಿದ್ದ ಜನರನ್ನು ರಕ್ಷಿಸಲು ಆರಂಭಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಿದರು. 

ಬಳಿಕ ಜೆಸಿಬಿ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಯಿತು. ಈ ಗೋಡೆ ಸರಿಪಡಿಸುವಂತೆ ಜನರು ಸ್ಮಶಾನದ ಆಡಳಿತ ಮಂಡಳಿಗೆ ಹಲವು ಬಾರಿ ಮನವಿ ಮಾಡಿದ್ದು, ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವ್ಯಾನ್​​ಗೆ ಟ್ರಕ್​ ಡಿಕ್ಕಿ: ಮದುವೆ ಮುಗಿಸಿ ವಾಪಸ್​ ಬರುತ್ತಿದ್ದ 9 ಜನರ ದುರ್ಮರಣ - Rajasthan Road Accident

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.