ದಸರಾ ಮಹೋತ್ಸವ: ದೀಪಾಲಂಕಾರದಿಂದ ಚಾಮರಾಜನಗರ ಜಗಮಗ- ವಿಡಿಯೋ - Dasara lightings - DASARA LIGHTINGS
🎬 Watch Now: Feature Video
Published : Oct 4, 2024, 6:32 PM IST
ಚಾಮರಾಜನಗರ: ನಾಡಿನೆಲ್ಲೆಡೆ ದಸರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ. ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಉದ್ಯಾನವನದ ಬಳಿ ಶಾಸಕ ಸಿ.ಪುಟ್ಟರಂಗಶೆಟ್ಟಿ ದಸರಾ ದೀಪಾಲಂಕಾರಕ್ಕೆ ವಿದ್ಯುತ್ ಗುಂಡಿ ಒತ್ತುವ ಮೂಲಕ ಗುರುವಾರ ಸಂಜೆ ಚಾಲನೆ ನೀಡಿದರು. ಇದೀಗ ಇಡೀ ನಗರ ಆಕರ್ಷಕ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.
ದಸರಾ ಮಹೋತ್ಸವದ ಅಂಗವಾಗಿ ಚಾಮರಾಜನಗರ 8 ಕಿ.ಮೀ.ಗೂ ಹೆಚ್ಚು ವ್ಯಾಪ್ತಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಗರದ ಪ್ರಮುಖ 10 ವೃತ್ತಗಳಲ್ಲಿ ವಿಶೇಷವಾಗಿ ದೀಪಾಲಂಕಾರ ಗಮನ ಸೆಳೆಯುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್ ಪ್ರತಿಕೃತಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ದೇವರ ಪ್ರತಿಕೃತಿಗಳಿಗೂ ಆಕರ್ಷಕವಾಗಿ ಬಣ್ಣಬಣ್ಣದ ದೀಪಗಳನ್ನು ಅಳವಡಿಸಲಾಗಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಣ್ಣದ ದೀಪಗಳಿಂದ ಬಿಂಬಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬಣ್ಣದ ಬೆಳಕಿನ ಸ್ವಾಗತ ಕಮಾನುಗಳನ್ನು ಹಾಕಲಾಗಿದೆ. ಜಿಲ್ಲಾಡಳಿತ ಭವನ, ಜಿಲ್ಲಾ ಪೊಲೀಸ್ ಕಚೇರಿ ಸೇರಿದಂತೆ ವಿವಿಧೆಡೆ ವಿಶೇಷವಾಗಿ ದೀಪಾಲಂಕಾರ ಮಾಡಲಾಗಿದೆ. ಜಗಮಗಿಸುವ ದೀಪಗಳಿಂದ ನಗರವನ್ನು ಸಿಂಗಾರಗೊಳಿಸಲಾಗಿದ್ದು, ಚಾಮರಾಜನಗರ ಬೆಳಕಿನಿಂದ ಕಂಗೊಳಿಸುತ್ತಿದೆ.
ಇದನ್ನೂ ಓದಿ: 'ದಸರಾ ವಿದ್ಯುತ್ ದೀಪಾಲಂಕಾರ'ಕ್ಕೆ ಚಾಲನೆ: 21 ದಿನ 130 ಕಿ.ಮೀ. ರಸ್ತೆ ಝಗಮಗ - Mysuru Dasara illumination