ವಿಜೃಂಭಣೆಯಿಂದ ನೆರವೇರಿದ ಮೈಸೂರು ಶ್ರೀ ಚಾಮುಂಡೇಶ್ವರಿ ರಥೋತ್ಸವ: ವಿಡಿಯೋ

🎬 Watch Now: Feature Video

thumbnail

By ETV Bharat Karnataka Team

Published : Oct 16, 2024, 9:15 PM IST

ಮೈಸೂರು: ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಗೈರುಹಾಜರಿಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಬೆಳಗ್ಗೆ 9 ಗಂಟೆಯಿಂದ 9.15ರ ಶುಭಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ಕೊಟ್ಟರು. 

ಶಕ್ತಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತ ಬೃಹತ್ ರಥ ದೇಗುಲವನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿತು. ಈ ವೇಳೆ 21 ಸುತ್ತು ಸಿಡಿಮದ್ದು ಸಿಡಿಸಿ ಗೌರವ ಸಮರ್ಪಿಸಲಾಯಿತು.

ರಥದ ಮೇಲೆ ಹಣ್ಣು ಜವನ ಎಸೆದು ಹರಕೆ ತೀರಿಸಿದ ಭಕ್ತರು ಜೈ ಚಾಮುಂಡಿ, ಉಘೇ ಉಘೇ ಚಾಮುಂಡಿ ಎಂದು ಘೋಷಣೆ ಕೂಗಿದರು. ನಾದಸ್ವರ ವಾದನ, ಪೊಲೀಸ್ ವಾದ್ಯವೃಂದ, ವೀರಗಾಸೆ ತಂಡಗಳು ರಥೋತ್ಸವಕ್ಕೆ ಮೆರುಗು ತಂದವು.

ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಗೆ ಚಿನ್ನ, ವಜ್ರದ ಆಭರಣಗಳಿಂದ ಅಲಂಕರಿಸಲಾಗಿತ್ತು. ಬೃಹದಾಕಾರದ ರಥಕ್ಕೆ ವಿವಿಧ ಬಣ್ಣದ ಬಾವುಟಗಳನ್ನು ಕಟ್ಟಲಾಗಿತ್ತು. ವಿವಿಧ ಬಗೆಯ ಹೂವುಗಳು, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ರಥೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರ ಆಗಮಿಸಿದ್ದರು.

ಇದನ್ನೂ ಓದಿ: 'ಚಾಮುಂಡೇಶ್ವರಿ ದೇವಾಲಯ ಪ್ರಾಧಿಕಾರದಲ್ಲಿ ತೀರ್ಮಾನ ಕೈಗೊಳ್ಳುವ ಮುನ್ನ ಕೋರ್ಟ್‌ ಅನುಮತಿ ಕಡ್ಡಾಯ'

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.