ತುಮಕೂರು: ಆಂಗ್ಲ ನಾಮಫಲಕ ತೆರವು ವಿಚಾರ; 2 ಗುಂಪುಗಳ ನಡುವೆ ಗಲಾಟೆ - Clash

🎬 Watch Now: Feature Video

thumbnail

By ETV Bharat Karnataka Team

Published : Mar 6, 2024, 10:06 AM IST

ತುಮಕೂರು: ಆಂಗ್ಲ ಭಾಷೆಯಲ್ಲಿದ್ದ ನಾಮಫಲಕಗಳನ್ನು ತೆರವುಗೊಳಿಸಬೇಕೆಂಬ ಕುರಿತು ಪರ-ವಿರೋಧ ಹೇಳಿಕೆಗಳ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಇಲ್ಲಿನ ತಿಲಕ್​ ಪಾರ್ಕ್​ ಪೊಲೀಸ್ ಠಾಣೆ ಮುಂಭಾಗ ಬಿಗುವಿನ ವಾತಾವರಣ ಏರ್ಪಟ್ಟಿತು. ಕೆಲವು ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಇನ್ನೊಂದೆಡೆ, ರಕ್ಷಣಾ ವೇದಿಕೆ ಕಾರ್ಯಕರ್ತರ ವರ್ತನೆಯ ವಿರುದ್ಧ ಕೆಲವು ವರ್ತಕರು ಗುಂಪುಗೂಡಿ ವಿರೋಧ ವ್ಯಕ್ತಪಡಿಸಿದರು. 

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಅಥವಾ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಬರೆಸಲು ಇತ್ತೀಚಿಗೆ ರಾಜ್ಯ ಸರ್ಕಾರ ಸೂಚಿಸಿದ್ದು, ಮಾರ್ಚ್ 13 ರವರೆಗೆ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ನೀಡಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಯಾತ್ರಿಗಳ ಪಾದ ತೊಳೆದು ಮಸಾಜ್ ಮಾಡಿದ ಅವಧೂತ ವಿನಯ್ ಗುರೂಜಿ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.