ವಿಧಾನಸೌಧದಲ್ಲಿ ಜನಸ್ಪಂದನಾ ಕಾರ್ಯಕ್ರಮ: ಸಿಎಂ ಬಳಿ ಅಳಲು ತೋಡಿಕೊಳ್ಳುತ್ತಿರುವ ಜನ - ನೇರಪ್ರಸಾರ
🎬 Watch Now: Feature Video
Published : Feb 8, 2024, 11:35 AM IST
|Updated : Feb 8, 2024, 1:02 PM IST
ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಸಿಎಂಗೆ ದೂರು ಹಾಗೂ ಮನವಿ ಸಲ್ಲಿಸಲು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಜನ ಆಗಮಿಸಿದ್ದಾರೆ.
ಜನರ ದೂರು ಸ್ವೀಕರಿಸಲು ಇಲಾಖಾವಾರು ಕೌಂಟರ್ ಮಾಡಿದ್ದು, ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕೌಂಟರ್ಗಳಲ್ಲಿ ತಮ್ಮ ಅಹವಾಲಿನ ಅರ್ಜಿಗಳನ್ನು ಹಿಡಿದು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ದೂರದೂರುಗಳಿಂದ ಬಂದಿರುವ ಸಾರ್ವಜನಿಕರು ವಿವಿಧ ಅಹವಾಲಿನೊಂದಿಗೆ ಪರಿಹಾರಕ್ಕಾಗಿ ಆಗಮಿಸಿದ್ದಾರೆ. ಕೌಂಟರುಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ವಿಶೇಷಚೇತನರು, ಹಿರಿಯ ನಾಗರಿಕರು ಜನತಾ ದರ್ಶನಕ್ಕೆ ಆಗಮಿಸಿ, ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ.
ವಯೋವೃದ್ಧರು, ಹಿರಿಯ ನಾಗರಿಕರು, ವಿಶೇಷಚೇತನರು, ಗರ್ಭಿಣಿಯರಿಗಾಗಿ Battery ಚಾಲಿತ buggy/Wheel Chairs ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಬಂಧಿಸಿದ ಇಲಾಖೆಯ ಸ್ಟಾಲ್ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.
ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು ಜನತಾ ದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.