ರಾಜ್ಯ ಸಚಿವ ಸಂಪುಟ ಸಭೆ: ಹೆಚ್ ಕೆ ಪಾಟೀಲ್ ಮಾಧ್ಯಮಗೋಷ್ಠಿ - LIVE - ಕೇಂದ್ರ ಬಜೆಟ್ ಬಗ್ಗೆ ಸಿದ್ದರಾಮಯ್ಯ
🎬 Watch Now: Feature Video
Published : Feb 1, 2024, 2:47 PM IST
|Updated : Feb 1, 2024, 3:34 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಚಿವ ಸಂಪುಟ ಸಭೆ ಬಳಿಕ ವಿಧಾನಸಭೆ ಕಾನ್ಫರೆನ್ಸ್ ಹಾಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಹೆಚ್ ಕೆ ಪಾಟೀಲ್ ಅವರು ಮಾಹಿತಿ ನೀಡುತ್ತಿದ್ದಾರೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಹಾಗೆಯೇ ಹೆಚ್ ಕೆ ಪಾಟೀಲ್ ಅವರು ಸಚಿವ ಸಂಪುಟ ಸಭೆಯಲ್ಲಿ ನಡೆದ ಚರ್ಚೆ ಮತ್ತು ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ.
ಫೆ.12ರಂದು ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲಾಗಿದ್ದು, ಫೆ.16ಕ್ಕೆ ಬಜೆಟ್ ಮಂಡನೆ ಮಾಡಲು ಕಳೆದ ಸಚಿವ ಸಂಪುಟ ಸಭೆ ತೀರ್ಮಾನಿಸಿತ್ತು. ಫೆ.12ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ.16ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆ.23ರ ವರೆಗೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದ್ದರು. ಜೊತೆಗೆ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಂಪುಟ ಸಭೆ ನಿರ್ಧರಿಸಿತ್ತು.