LIVE: ಬೆಳಗಾವಿಯಲ್ಲಿ ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಮಾಧ್ಯಮಗೋಷ್ಠಿ - Congress Press Meet - CONGRESS PRESS MEET
🎬 Watch Now: Feature Video
Published : May 5, 2024, 10:52 AM IST
|Updated : May 5, 2024, 11:37 AM IST
ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ತೆರಳಿರುವ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸುತ್ತಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ರಾಜ್ಯದಲ್ಲಿ ಬೆಳಗಾವಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಇಂದು ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಳಿಕ ಮನೆ ಮನೆ ಪ್ರಚಾರ ಇರಲಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ಕರೆದು ಸರ್ಕಾರದ ಸಾಧನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಬೆಳಗಾವಿಯಲ್ಲಿ ಮೃಣಾಲ್ ಹೆಬ್ಬಾಳ್ಕರ್ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿ ಅವರು ಕಾಂಗ್ರೆಸ್ನಿಂದ ಕಣಕ್ಕೆ ಇಳಿದಿದ್ದಾರೆ. ಈ ಅಭ್ಯರ್ಥಿಗಳ ಪರ ಶನಿವಾರ ಮತ್ತು ಇಂದು ಕಾಂಗ್ರೆಸ್ ನಾಯಕರು ಮತಯಾಚನೆ ಮಾಡಿದ್ದಾರೆ.
Last Updated : May 5, 2024, 11:37 AM IST