ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ - ನೇರಪ್ರಸಾರ - Yettinhole Project
🎬 Watch Now: Feature Video
Published : Sep 6, 2024, 1:30 PM IST
|Updated : Sep 6, 2024, 3:54 PM IST
ಹಾಸನ: ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿದ್ದಾರೆ. ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನ ಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಿಗೆ ಹರಿಸುವ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಇದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕುಗಳ 38 ಪಟ್ಟಣ ಪ್ರದೇಶಗಳ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ಕುಡಿಯುವ ನೀರನ್ನು ಒದಗಿಸುವುದು. ಹಾಗೂ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು ವ್ಯಾಪ್ತಿಯಲ್ಲಿ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಿ ಅಂರ್ತಜಲ ಮರುಪೂರಣ ಮಾಡುವ ಮಹತ್ವದ ಯೋಜನೆ ಇದಾಗಿದೆ.
Last Updated : Sep 6, 2024, 3:54 PM IST