LIVE: ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ - CM Siddaramaiah Press Meet - CM SIDDARAMAIAH PRESS MEET
🎬 Watch Now: Feature Video
Published : Jun 4, 2024, 6:52 PM IST
|Updated : Jun 4, 2024, 7:06 PM IST
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ 9 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 17 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಕರ್ನಾಟಕ ಲೋಕಸಮರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮೇಲುಗೈ ಸಾಧಿಸಿದರೆ, ಕಾಂಗ್ರೆಸ್ ಎರಡಂಕಿಯ ಸ್ಥಾನಗಳನ್ನು ಪಡೆಯದೇ ತುಸು ಹಿನ್ನಡೆ ಅನುಭವಿಸಿದೆ. ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳಿದ್ದರೂ ನಿರೀಕ್ಷಿತ ಫಲಿತಾಂಶ ಪಡೆಯವಲ್ಲಿ ಕಾಂಗ್ರೆಸ್ ವಿಫಲವಾಗಿದೆ.ಫಲ ನೀಡದ ಪಂಚ ಗ್ಯಾರಂಟಿ: ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪಂಚ ಗ್ಯಾರಂಟಿ ನಿರೀಕ್ಷಿತ ಫಲ ತಂದು ಕೊಟ್ಟಿಲ್ಲ. ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ 136 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಪಂಚ ಗ್ಯಾರಂಟಿಗಳು ಭರ್ಜರಿ ಗೆಲುವಿಗೆ ಕಾರಣವಾಗಿದ್ದವು. ಆದರೆ ಈ ಮ್ಯಾಜಿಕ್ ಲೋಕಸಮರದಲ್ಲಿ ಅಷ್ಟಾಗಿ ವರ್ಕೌಟ್ ಆದಂತೆ ತೋರುತ್ತಿಲ್ಲ.ಸ್ವತಃ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಕಂಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರು ಕ್ಷೇತ್ರವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಮೇಲ್ನೋಟಕ್ಕೆ ಮೈತ್ರಿ ಮ್ಯಾಜಿಕ್ ಮುಂದೆ ಪಂಚ ಗ್ಯಾರಂಟಿ ಪ್ರಭಾವ ಗೌಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Last Updated : Jun 4, 2024, 7:06 PM IST